ಚಿಂತಾಮಣಿ: ಚಿಂತಾಮಣಿ–ಚೇಳೂರು ರಸ್ತೆಯ ಕೋರ್ಲಪರ್ತಿ ಕದಿರೇನಹಳ್ಳಿ ಕ್ರಾಸ್ ಬಳಿ ಶನಿವಾರ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ ಮತ್ತೊಬ್ಬ ಸವಾರನನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೇಳೂರು ತಾಲ್ಲೂಕಿನ ಹೊಸವುಡ್ಯ ಗ್ರಾಮದ ಶಿವಾ ಮೃತಪಟ್ಟವರು.

ಈ ಸಂಬಂಧ ಮೃತನ ಪತ್ನಿ ಅರುಣಾ ಅವರು ಕೆಂಚಾರ್ಲಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ತಾವು ಮೂಲತಃ ಚೇಳೂರು ತಾಲ್ಲೂಕಿನ ಹೊಸವುಡ್ಯ ಗ್ರಾಮದವರು. ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರದಲ್ಲಿ ನೇಯ್ಗೆ ಕೆಲಸ ಮಾಡುತ್ತಿದ್ದೇವೆ ಎಂದು ಅರುಣಾ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ನನ್ನ ಗಂಡ ಶಿವಾ ಮತ್ತು ಸಹೋದರ ಮಂಜುನಾಥ್ ದೊಡ್ಡಬಳ್ಳಾಪುರದಿಂದ ಹೊಸವುಡ್ಯಕ್ಕೆ ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಕೋರ್ಲಪರ್ತಿ–ಕದಿರೇನಹಳ್ಳಿ ಕ್ರಾಸ್ ಬಳಿ ಬೈಕ್ಗೆ ನಾಯಿಯೊಂದು ಅಡ್ಡಬಂದಿದ್ದು, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದೆ. ಸ್ಥಳೀಯರು ಬಂದು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-16-1786214907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.