ಚಿಂತಾಮಣಿ: ನಗರದ ಪ್ರತಿಷ್ಠಿತ ಎನ್.ಆರ್. ಬಡಾವಣೆಯಲ್ಲಿ ಗುರುವಾರ ಮಗು ಅಪಹರಣ ಯತ್ನ ನಡೆದಿದೆ. ಎನ್.ಆರ್. ಬಡಾವಣೆಯ ರಾಮಮಂದಿರದ ಪಕ್ಕದಲ್ಲಿರುವ ಮನೆಯೊಂದರಲ್ಲಿ ಈ ಪ್ರಕರಣ ನಡೆದಿದೆ.

ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಅಪಹರಣಕ್ಕೆ ಕಿಡಿಗೇಡಿಗಳು ಯತ್ನಿಸಿದ್ದಾರೆ. ಈ ವೇಳೆ ಗಾಬರಿಗೊಂಡ ಮನೆಯವರು ಕಿರುಚಾಡಿದ್ದಾರೆ. ಈ ಕಿರುಚಾಟ ಕೇಳಿ ಅಕ್ಕಪಕ್ಕದವರು ಓಡಿಬಂದಿದ್ದು, ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.

ಸಾರ್ವಜನಿಕರು 112 ಪೊಲೀಸ್ ತುರ್ತು ವಾಹನಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದರು. ಜೊತೆಗೆ ಆತಂಕಪಡಬೇಡಿ ಎಂದು ಮಗುವಿನ ಪೋಷಕರಿಗೆ ಧೈರ್ಯ ತುಂಬಿದರು.

ಪೊಲೀಸರು ಕೇವಲ ಪರಿಶೀಲನೆ ನಡೆಸಿದರೆ ಸಾಲದು. ಪೊಲೀಸ್ ಗಸ್ತು ಹೆಚ್ಚಿಸಬೇಕು. ಕಳ್ಳರನ್ನು ಪತ್ತೆಹಚ್ಚಲು ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-16-481473944

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.