ಚಿಂತಾಮಣಿ: ನಗರದ ಸರ್ಕಾರಿ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್, ಐಕ್ಯುಎಸಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಕಾಲೇಜಿನಲ್ಲಿ ಗುರುವಾರ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಯಿತು.

ವಿದ್ಯಾರ್ಥಿನಿಯರು ಹಾಗೂ ಕಾಲೇಜಿನ ಸಿಬ್ಬಂದಿ ರಕ್ತದಾನದಿಂದ 42 ಯುನಿಟ್ ರಕ್ತ ಸಂಗ್ರಹವಾಯಿತು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲ್ಲೂಕು ಘಟಕದ ಕಾರ್ಯದರ್ಶಿ ನಾರಾಯಣರೆಡ್ಡಿ ಮಾತನಾಡಿ, ಎಲ್ಲ ದಾನಗಳಿಗಿಂತಲೂ ಮತ್ತೊಬ್ಬರ ಜೀವ ಉಳಿಸುವ ರಕ್ತದಾನವು ಶ್ರೇಷ್ಠವಾದುದು. ವಿದ್ಯಾರ್ಥಿಗಳು, ಯುವಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಹೇಳಿದರು.

ಆರೋಗ್ಯವೇ ಭಾಗ್ಯ, ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಚೆನ್ನಾಗಿದ್ದಾಗ ಮಾತ್ರ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಮತ್ತು ಯುವಜನಾಂಗ ಆರೋಗ್ಯದ ಕಡೆ ಗಮನ ವಹಿಸಬೇಕು. ಉತ್ತಮ ಆರೋಗ್ಯ ಕಾಪಾಡಿಕೊಂಡು ರಕ್ತದಾನ ಮಾಡುವ ಮೂಲಕ ರೋಗಿಗಳಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.

ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಮತ್ತಿತರ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಜಿಲ್ಲೆಯಲ್ಲಿ ಬೇಡಿಕೆಯಷ್ಟು ರಕ್ತದ ಸಂಗ್ರಹಣೆ ಆಗುತ್ತಿಲ್ಲ. ರಕ್ತವನ್ನು ಕಾರ್ಖಾನೆಯಲ್ಲಿ ತಯಾರಿಸಲಾಗದು. ರಕ್ತದಾನದಿಂದ ಅನೇಕ ಜೀವಗಳನ್ನು ಉಳಿಸಬಹುದು ಎಂದು ಹೇಳಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವರದರಾಜು ಮಾತನಾಡಿ, ಸಮಾಜದ ಆಧಾರಸ್ತಂಭಗಳಾದ ಮಹಿಳೆಯರು ತಮ್ಮ ಆರೋಗ್ಯ ವೃದ್ಧಿಸಿಕೊಳ್ಳಬೇಕು. ಪೌಷ್ಟಿಕಾಂಶವುಳ್ಳ ಆಹಾರ ಸೇವನೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.

ಕಾಲೇಜಿನ ವಿದ್ಯಾರ್ಥಿನಿಯರಿಗೆ ಆರೋಗ್ಯ ಹಾಗೂ ರಕ್ತದಾನದ ಮಹತ್ವದ ಅರಿವು ಮೂಡಿಸಲು ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಪಿ.ರಮೇಶ್ ತಿಳಿಸಿದರು.

ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕಿ ಎಚ್.ಎಸ್.ಕವಿತ, ಸದಸ್ಯರಾದ ಕೆ.ವೈ. ಮಾಧವಿ, ಎಚ್.ಆರ್. ಶಿವಕುಮಾರ್, ಜಿ.ಸಂತೋಷ್, ಕೆ.ಸಿ. ಪೂರ್ಣಿಮ, ನಂಜುಂಡಮೂರ್ತಿ, ಪಿ.ಆರ್. ನರಸಪ್ಪ, ಐಕ್ಯೂಎಸಿ ಸಂಚಾಲಕ ಅರವಿಂದರೆಡ್ಡಿ, ಕಾಲೇಜಿನ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-16-2119929460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.