ಚಿಂತಾಮಣಿ: ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣ ಸಾಮರ್ಥ್ಯಸೌಧದಲ್ಲಿ ಸೋಮವಾರ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ನೇಕಾರರ ಸಮುದಾಯದ ಒಕ್ಕೂಟ ಅಧ್ಯಕ್ಷ ನಾಗರಾಜ್ ಮಾತನಾಡಿ, ‘ದೇವರ ದಾಸಿಮಯ್ಯ ಸರಳ ಸಾಹಿತ್ಯದ ಮೂಲಕ ಜ್ಞಾನ ಮತ್ತು ಭಕ್ತಿಯ ಸಮನ್ವಯವನ್ನು ಬೋಧಿಸಿದ ಶರಣ. ಅವರ ವಚನಗಳು, ಸರಳ, ವೈಚಾರಿಕ ಮತ್ತು ಸಾಮಾಜಿಕ ಸುಧಾರಣೆ ಸಂದೇಶಗಳನ್ನು ಒಳಗೊಂಡಿವೆ. ನೇಕಾರ ವೃತ್ತಿ ಮಾಡಿಕೊಂಡಿದ್ದರೂ ಸಮಾಜದಲ್ಲಿನ ಅಂಕು-ಡೊಂಕುಗಳನ್ನು ತಿದ್ದುವ 176 ವಚನಗಳನ್ನು ರಚಿಸಿದ್ದಾರೆ’ ಎಂದರು.

ನೇಕಾರರ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ ನೀಡಬೇಕು. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.

ಶಿಕ್ಷಕ ಬಾಲಾಜಿ ಮಾತನಾಡಿ, 11ನೇ ಶತಮಾನದ ಆದಿಭಾಗದಲ್ಲಿ ಜಾತಿ ಪದ್ಧತಿ, ಗಂಡು-ಹೆಣ್ಣಿನ ಸಮಾನತೆ ಬಗ್ಗೆ ದೇವರ ದಾಸಿಮಯ್ಯ ಮಾತನಾಡಿದ್ದರು. ಕನ್ನಡದ ಆದ್ಯ ವಚನಕಾರರು, ವಚನಬ್ರಹ್ಮ ಎಂಬ ಖ್ಯಾತಿ ಹೊಂದಿದ್ದಾರೆ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಸ್.ಆನಂದ್ ಮಾತನಾಡಿದರು.

ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆರ್.ಶ್ರೀನಾಥ್, ತಹಶೀಲ್ದಾರ್ ಸುದರ್ಶನ ಯಾದವ್, ಪೌರಾಯುಕ್ತ ಜಿ.ಎನ್. ಚಲಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ತನುಜಾ, ಎಇಇ ನಾಗರಾಜ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಅಶೋಕಕುಮಾರ್, ಸಮುದಾಯದ ಪ್ರಭಾಕರರೆಡ್ಡಿ, ವೆಂಕಟೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-16-1691865306

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.