ಚಿಂತಾಮಣಿ: ನವದೆಹಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ ಹಾಗೂ ಕೃಷಿಗೆ ಸಂಬಂಧಿತ ಸಂಸ್ಥೆಗಳು, ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ ಮತ್ತು ತೋಟಗಾರಿಕಾ ಇಲಾಖೆ ಸಹಯೋಗದೊಂದಿಗೆ ಈ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ತಾಂತ್ರಿಕತೆ ಮತ್ತು ತಳಿ ಮಾಹಿತಿ ಲಭ್ಯವಾಗುವಂತೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಎಂಬ ರಾಷ್ಟ್ರೀಯ ಕಾರ್ಯಕ್ರಮ ಮೇ 29ರಿಂದ ಜೂನ್ 12ರವರೆಗೆ ಹಮ್ಮಿಕೊಳ್ಳಲಾಗಿದೆ.

ಕೃಷಿ ಸಂಶೋಧನೆ ಮತ್ತು ರೈತ ಸಮುದಾಯದ ನಡುವಿನ ಅಂತರ ಕಡಿಮೆ ಮಾಡುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ನಗರದ ಕೃಷಿ ವಿಜ್ಞಾನ ಕೇಂದ್ರ ನೀಡಿರುವ ಪ್ರಕಟಣೆ ತಿಳಿಸಿದೆ.

ವಿಕಸಿತ ಕೃಷಿ ಸಂಕಲ್ಪ ಅಭಿಯಾನದಡಿ ಕೃಷಿ ಸಮುದಾಯಕ್ಕೆ ಮಣ್ಣಿನ ಆರೋಗ್ಯ, ಮಣ್ಣು ಮತ್ತು ನೀರಿನ ಸಂರಕ್ಷಣೆ, ಬೀಜೋಪಚಾರ ಬಗ್ಗೆ ಸಲಹೆ ನೀಡಲಾಗುವುದು. ಹವಾಮಾನ ಸ್ಥಿತಿ ಸ್ಥಾಪಕ ತಂತ್ರಜ್ಞಾನ, ನೈಸರ್ಗಿಕ ಸಾವಯವ ಕೃಷಿ, ತೋಟಗಾರಿಕೆ ಬೆಳೆಗಳಲ್ಲಿ ಉತ್ಪಾದನಾ ತಂತ್ರಜ್ಞಾನ, ಸಮಗ್ರ ಕೃಷಿ ವ್ಯವಸ್ಥೆ ಸಂಪನ್ಮೂಲ ಸಂರಕ್ಷಣಾ ತಂತ್ರಜ್ಞಾನ ಕುರಿತು ಮಾರ್ಗದರ್ಶನ ಮಾಡಲಾಗುವುದು.

ಪಶು ಆಹಾರ ಆರೋಗ್ಯ ನಿರ್ವಹಣೆ ಪೌಷ್ಟಿಕಾಂಶ ಉದ್ಯಾನ ಮೌಲ್ಯವರ್ಧನೆ ಕುರಿತು ಮಾಹಿತಿ ಪ್ರಸಾರ ಮಾಡಲಾಗುವುದು. ಭವಿಷ್ಯದ ಸಂಶೋಧನೆ ರೂಪಿಸಲು ರೈತರಿಂದ ಕೃಷಿಗೆ ಸಂಬಂಧಿಸಿದ ಸಮಸ್ಯೆ ಸಂಗ್ರಹಿಸುವುದು. ಈ ರಾಷ್ಟ್ರೀಯ ಜನಜಾಗೃತಿ ಅಭಿಯಾನದಲ್ಲಿ 1500 ರಿಂದ 2000 ತಂಡಗಳ ಮೂಲಕ ದೇಶದ 700 ಜಿಲ್ಲೆಗಳಲ್ಲಿನ ಸುಮಾರು 1.5ರಿಂದ 2ಕೋಟಿ ರೈತರೊಂದಿಗೆ ನೇರ ಸಂವಾದ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.