ಚಿಂತಾಮಣಿ: ಜಿಲ್ಲಾಧಿಕಾರಿ ಜಿ.ಪ್ರಭು ಬುಧವಾರ ನಗರಕ್ಕೆ ಭೇಟಿ ನೀಡಿ ಐಡಿಎಸ್ಎಂಟಿ ಅಂಗಡಿ ಮಳಿಗೆಗಳ ಸಂಕೀರ್ಣ ಮತ್ತು ರೈಲ್ವೆ ನಿಲ್ದಾಣ ರಸ್ತೆಯ ಮಾರ್ಕಿಂಗ್ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ, ಸೂಚನೆ ನೀಡಿದರು.

ನಗರದ ಹೃದಯ ಭಾಗದಲ್ಲಿರುವ ಐಡಿಎಸ್ಎಂಟಿ ಅಂಗಡಿ ಮಳಿಗೆಗಳ ಬಳಿ ಬೀದಿಬದಿ ವ್ಯಾಪಾರಸ್ಥರಿಗೂ ಅವಕಾಶ ಮಾಡಿಕೊಡುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭರವಸೆ ನೀಡಿದ್ದರು. ಅದರಂತೆ ಈಗಿರುವ ಅಂಗಡಿ ಮಳಿಗೆಗಳ ಮೇಲೆ ಮತ್ತೆ ಎರಡು ಅಂತಸ್ತು ನಿರ್ಮಾಣ ಮಾಡಲಾಗುವುದು. ಪ್ರಸ್ತುತ 200 ಅಂಗಡಿ ಮಳಿಗೆಗಳಿದ್ದು ಮುಂದೆ 300-400 ಅಂಗಡಿಗಳು ನಿರ್ಮಾಣವಾಗುವ ಸಂಭವವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ನಗರದಿಂದ ರೈಲ್ವೆ ನಿಲ್ದಾಣಕ್ಕೆ ತೆರಳುವ ರಸ್ತೆ ಕಿರಿದಾಗಿದ್ದು ಪ್ರಯಾಣಿಕರು ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಮೀಟರ್ ಗೇಜ್ ಅಳವಡಿಸಿದ ನಂತರ ರೈಲುಗಳ ಟ್ರಿಪ್ ಸಂಖ್ಯೆ ಹೆಚ್ಚಾಗಿದ್ದು ಈ ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಗೂಡ್ಸ್ ರೈಲುಗಳ ಸಂಚಾರವೂ ಆರಂಭವಾಗಲಿದೆ. ಹೀಗಾಗಿ ರೈಲ್ವೆ ನಿಲ್ದಾಣದ ರಸ್ತೆಯನ್ನು ಅಗಲೀಕರಣಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದರು.

ಸಚಿವರ ಆದೇಶದಂತೆ ನಗರಸಭೆ ಅಧಿಕಾರಿಗಳು ರಸ್ತೆ ಅಳತೆ ಮಾಡಿ ಮಾರ್ಕಿಂಗ್ ಮಾಡುತ್ತಿದ್ದರು. ಜಿಲ್ಲಾಧಿಕಾರಿ ರಸ್ತೆ ಪರಿಶೀಲನೆ ನಡೆಸಿ ಅಗಲೀಕರಣಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ತಹಶೀಲ್ದಾರ್ ಸುದರ್ಶನ ಯಾದವ್, ನಗರಸಭೆ ಆಯುಕ್ತ ಜಿ.ಎನ್.ಚಲಪತಿ, ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-16-486287507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.