ಚಿಂತಾಮಣಿ: ತಾಲ್ಲೂಕಿನ ಮುರುಗಮಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಡಳಿತಾಧಿಕಾರಿ ಅಶ್ವತ್ಥನಾರಾಯಣ ಸಿಬ್ಬಂದಿಗೆ ಸೂಚಿಸಿದರು.

ಶುಕ್ರವಾರ ನಡೆದ ಗ್ರಾಮ ಸಭೆ ಮಾತನಾಡಿದ ಅವರು, ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜಾತ್ರೆ ಅಥವಾ ಹಬ್ಬದ ಸಮಯದಲ್ಲಿ ಜನರ ಸಂಖ್ಯೆ ಹೆಚ್ಚಾಗಿರುತ್ತದೆ. ಜನದಟ್ಟಣೆ ಇರುವ ಕಡೆ ಸ್ವಚ್ಛತೆ ತುಂಬಾ ಮುಖ್ಯ ಎಂದರು.

ಗ್ರಾಮಗಳಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ ಸರಿಪಡಿಸಬೇಕು. ಬೇಸಿಗೆ ಆಗಿರುವುದರಿಂದ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇರುತ್ತದೆ. ಲೈನ್ಮ್ಯಾನ್ ಅಥವಾ ವಾಟರ್ಮ್ಯಾನ್ ಜೊತೆ ಮಾತನಾಡಿ ಎಲ್ಲೂ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಗ್ರಾಮಗಳಲ್ಲಿ ಅಳವಡಿಸಿರುವ ಆರ್ಒ ಪ್ಲಾಂಟ್ಗಳ (ಶುದ್ಧ ಕುಡಿಯುವ ನೀರಿನ ಘಟಕ) ಬಗ್ಗೆ ಗಮನಹರಿಸಬೇಕು. ಅವುಗಳು ಕೆಟ್ಟು ಹೋಗದಂತೆ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.

ಓವರ್ ಹೆಡ್ ಟ್ಯಾಂಕ್ಗಳಿಂದ ನೀರು ಪೋಲಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

2026-27 ಸಮಗ್ರ ಸಹಭಾಗಿ ವಾರ್ಷಿಕ ಕ್ರಿಯಾ ಯೋಜನೆ ಕುರಿತು ಮಹಿಳೆ ಮತ್ತು ಮಕ್ಕಳ ಸಮಸ್ಯೆಗಳ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಯಿತು.

ಗ್ರಾಪಂ ನೋಡಲ್ ಅಧಿಕಾರಿ ರಾಧಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ. ಸುರೇಶ್, ಕಾರ್ಯದರ್ಶಿ ಕೆ. ಸರಿತ, ಮುರುಗುಮಲ್ಲ ಹೊರ ಠಾಣೆ ಸಹಾಯಕ ಸಬ್ ಇನ್ಸ್ಪೆಕ್ಟರ್ ಚಂದ್ರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-16-1563794763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.