ಚಿಂತಾಮಣಿ: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಬುಧವಾರ ವಿಶ್ವ ಭೂಮಿ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಜಿ. ಗೀತಾಂಜಲಿ ಮಾತನಾಡಿ, ‘ಪ್ರಕೃತಿ ವಿಕೋಪಕ್ಕೆ ತಿರುಗಿದರೆ, ಏನಾಗುತ್ತದೆ ಎಂಬುದಕ್ಕೆ ಕೊರೊನಾ ದೊಡ್ಡ ನಿದರ್ಶನವಾಗಿದ್ದು, ನಿಸರ್ಗದ ಎದುರು ಮನುಷ್ಯ ಅತ್ಯಂತ ಅಲ್ಪ ಎಂಬುದನ್ನು ಪ್ರತಿಯೊಬ್ಬರೂ ಅರಿತಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಮಾನವನ ಮಿತಿ ಮೀರಿದ ದುರಾಸೆಯಿಂದ ಹಸಿರು ಸಂಪತ್ತು ನಾಶವಾಗುತ್ತಿದೆ. ಅಭಿವೃದ್ಧಿ ಮತ್ತು ಸುಧಾರಿತ ತಂತ್ರಜ್ಞಾನದ ಹೆಸರಿನಲ್ಲಿ ಮನುಷ್ಯ ಕಾಡನ್ನು ನಾಶಪಡಿಸುತ್ತಿದ್ದಾನೆ. ಪರಿಣಾಮ ಪ್ರಾಣಿ ಸಂಕುಲಗಳು ಬೀದಿಗೆ ಬರುತ್ತಿವೆ. ತಾನು ಬೆಳೆಸಬೇಕಿದ್ದ ಮರಗಿಡಗಳನ್ನು ತಾನೇ ಕಡಿದು ಹಾಕಿದ ಕಾರಣ ಇಂದು ಶುದ್ಧ ಗಾಳಿಯಿಲ್ಲದೆ ಕೃತಕ ಆಮ್ಲಜನಕ ಮೊರೆಹೋಗುವ ದುಸ್ಥಿತಿಗೆ ಮನುಷ್ಯ ತಲುಪಿದ್ದಾನೆ ಎಂದರು.

ಭೂಮಿಯ ಮೇಲೆ ಬದುಕುವ ಹಕ್ಕು ಕೇವಲ ಮನುಷ್ಯನಿಗೆ ಮಾತ್ರವಲ್ಲ, ಪ್ರಕೃತಿಯ ಎಲ್ಲ ಜೀವಿಗಳಿಗೂ ಇದೆ ಎಂಬುದನ್ನು ಮರೆಯಬಾರದು. ಮಾನವರು ಎಚ್ಚೆತ್ತುಕೊಂಡು ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸಬೇಕು ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್. ಶಕುಂತಲ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಹರ್ಷಿತ, ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಶ್ರೀನಾಥ್, ಜಂಟಿ ಕಾರ್ಯದರ್ಶಿ ಕೆ.ಎನ್. ಮಂಜುನಾಥ, ಖಜಾಂಚಿ ಎಂ.ಎಸ್. ಚೌಡಪ್ಪ, ಸದಸ್ಯ ಕೆ.ಪಿ. ಮುನಿರಾಜು, ವಲಯ ಅರಣ್ಯಾಧಿಕಾರಿ ವೀರಭದ್ರಪ್ಪ ಕುಂಬಾರ, ವಕೀಲರು, ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-16-1233080483

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.