ಚಿಂತಾಮಣಿ: ಇಲ್ಲಿಯ ಮಾರುಕಟ್ಟೆಯಲ್ಲಿ ಐಟಿಸಿ ಕಂಪನಿ ಬ್ರಾಂಡ್ ಹೆಸರಿನ ಹೆಸರಿನಲ್ಲಿ ನಕಲಿ ಸಿಗರೇಟ್ ಮಾರಾಟ ಮಾಡಲಾಗುತ್ತಿದೆ ಎಂದು ಬೆಂಗಳೂರಿನ ಅನ್ವೇಷ್ ಐಪಿಆರ್ ಸರ್ವೀಸಸ್ ಸಂಸ್ಥೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಇಲ್ಲಿಯ ಎಂ.ಜಿ. ರಸ್ತೆಯಲ್ಲಿರುವ ಕುಮಾರ್ ಟ್ರೇಡರ್ಸ್ ಎಂಬ ಮಳಿಗೆಯಲ್ಲಿ ಐಟಿಸಿ ಕಂಪನಿ ಹೆಸರಿನಲ್ಲಿ ನಕಲಿ ಸಿಗರೇಟ್ ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಲಾಯಿತು. ಮಳಿಗೆಯಲ್ಲಿ ನಕಲಿ ಸಿಗರೇಟ್ ಉತ್ಪನ್ನಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿರುವುದು ಪತ್ತೆಯಗಿದೆ. ಇದು ಕಂಪನಿಯ ಹಕ್ಕುಸ್ವಾಮ್ಯದ ಉಲ್ಲಂಘನೆ ಎಂದು ಸಂಸ್ಥೆ ದೂರಿನಲ್ಲಿ ಆರೋಪ ಮಾಡಿದೆ.

ಈ ಅಕ್ರಮ ಚಟುವಟಿಕೆಯಿಂದ ಕಂಪನಿ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟಾಗುತ್ತಿದೆ. ಗ್ರಾಹಕರು ನಕಲಿ ಉತ್ಪನ್ನದಿಂದ ಮೋಸ ಹೋಗುತ್ತಿದ್ದಾರೆ. ಆದ್ದರಿಂದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಬೇಕು. ನಕಲಿ ಮಾಲು ವಶಪಡಿಸಿಕೊಂಡು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-16-349087281

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.