ಚಿಂತಾಮಣಿ: ತಾಲ್ಲೂಕಿನ ಕಸಬಾ ಹೋಬಳಿಯ ಚೀಮನಹಳ್ಳಿಯಲ್ಲಿ ಶುಕ್ರವಾರ ಸಂಜೆ ರೈತ ಕುರಿ ಮೇಕೆಗಾಗಿ ಮರಹತ್ತಿ ಸೊಪ್ಪು ಕಟಾವು ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ. ರೈತ ಲಕ್ಷ್ಮಣರೆಡ್ಡಿ (65) ಮೃತಪಟ್ಟ ವ್ಯಕ್ತಿ.

ಅವರು ತಮ್ಮ ತೋಟದಲ್ಲಿರುವ ಮರಹತ್ತಿ ಕುರಿ ಮತ್ತು ಮೇಕೆಗಳಿಗೆ ಸೊಪ್ಪು ಕಟಾವು ಮಾಡುತ್ತಿದ್ದರು. ಮರದ ಕೊಂಬೆಯೊಂದು ಸಮೀಪದಲ್ಲೆ ಹಾದುಹೋಗಿರುವ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದರಿಂದ ಲಕ್ಷ್ಮಣರೆಡ್ಡಿಗೆ ವಿದ್ಯುತ್ ಶಾಕ್ ತಗುಲಿ ಮರದಿಂದ ಕೆಳಗೆ ಬಿದ್ದಿದ್ದಾರೆ. ಸುತ್ತಮುತ್ತಲ ತೋಟಗಳಲ್ಲಿ ಕೆಲಸ ಮಾಡುತ್ತಿದ್ದವರು ಕೂಡಲೇ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತನ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಮೃತ ಲಕ್ಷ್ಮಣರೆಡ್ಡಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.