ಚಿಂತಾಮಣಿ: ಬೆಂಗಳೂರಿನ ರಾಷ್ಟ್ರೀಯ ಬೀಜ ನಿಗಮದ ವತಿಯಿಂದ 2025–26ನೇ ಸಾಲಿನ ಸಿ.ಎಸ್.ಆರ್ ಕಾರ್ಯಕ್ರಮದ ಅಂಗವಾಗಿ ರೈತರಿಗೆ ಜೇನು ಸಾಕಾಣಿಕೆ ತರಬೇತಿ ಹಾಗೂ ಜೇನುಗೂಡು ವಿತರಣೆ ಕಾರ್ಯಕ್ರಮವನ್ನು ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಯಿತು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಪಾಪಿರೆಡ್ಡಿ ಮಾತನಾಡಿ, ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಕೃಷಿಯ ಜೊತೆಗೆ ಜೇನುಸಾಕಾಣಿಕೆ, ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆ ಮತ್ತಿತರ ಉಪ ಕಸುಬುಗಳಲ್ಲಿ ತೊಡಗಿಸಿಕೊಳ್ಳಬೇಕು. ಕೃಷಿಯಲ್ಲಿ ಮಳೆ ಕೊರತೆ, ರೋಗರುಜಿನುಗಳು, ಬೆಲೆ ಕುಸಿತ ಮುಂತಾದ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ಸಮಗ್ರ ಕೃಷಿಗೆ ಪೂರಕವಾಗಿ ಉಪಕಸುಬುಗಳನ್ನು ಅಳವಡಿಸಿಕೊಂಡರೆ ಕೃಷಿಯು ಲಾಭದಾಯಕವಾಗುತ್ತದೆ ಎಂದು ಸಲಹೆ ನೀಡಿದರು.

ತರಬೇತಿಯಲ್ಲಿ ವೈಜ್ಞಾನಿಕ ಜೇನು ಸಾಕಾಣಿಕೆ ವಿಧಾನಗಳು, ಗೂಡು ನಿರ್ವಹಣೆ ಹಾಗೂ ಪರಾಗ ಸ್ಪರ್ಶದ ಮಹತ್ವವನ್ನು ವಿವರಿಸಲಾಯಿತು. ರೈತರ ಆದಾಯ ಹೆಚ್ಚಿಸಲು ಜೇನುಪೆಟ್ಟಿಗೆ ಹಾಗೂ ಜೇನು ಗೂಡುಗಳನ್ನು ವಿತರಿಸಲಾಯಿತು.

ಬೆಂಗಳೂರಿನ ರಾಷ್ಟ್ರೀಯ ಬೀಜ ನಿಗಮದ ಪ್ರಾದೇಶಿಕ ವ್ಯವಸ್ಥಾಪಕ ಅಹಮದ್ ರೆಜಾ ನೇತೃತ್ವ ಮತ್ತು ಚಿಕ್ಕಬಳ್ಳಾಪುರ ಎನ್.ಎಸ್.ಸಿ ತಂಡದ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.

ತುಮಕೂರಿನ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಲೋಗನಂದನ್, ಸಿ.ಇ.ಒ ನರಸಿಂಹರೆಡ್ಡಿ, ಶಿವರಾಮರೆಡ್ಡಿ, ತಜ್ಞರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-16-2066652788

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.