ಚಿಂತಾಮಣಿ: ಮಾನವ ಹಕ್ಕುಗಳ ಸಮಿತಿ, ಸ್ವಾಭಿಮಾನಿ ಕಟ್ಟಡ ಕಾರ್ಮಿಕರ ಸಂಘ ಮತ್ತು ಇತರೆ ಕಾರ್ಮಿಕ ಸಂಘಗಳ ಟ್ರೇಡ್ ಯೂನಿಯನ್ ವತಿಯಿಂದ ತಾಲ್ಲೂಕಿನ ಫಲಾನುಭವಿಗಳಿಗೆ ಮನೆ ನಿರ್ಮಾಣದ ಸಾಮಗ್ರಿಗಳನ್ನು ಶನಿವಾರ ಉಚಿತವಾಗಿ ವಿತರಿಸಲಾಯಿತು.

ಸಂಘಟನೆಗಳ ರಾಜ್ಯಾಧ್ಯಕ್ಷ ಸಿಎಂ. ಬೈರೇಗೌಡ ಮಾತನಾಡಿ, ‘ಕಾರ್ಮಿಕರ ಕಲ್ಯಾಣ ಮತ್ತು ಅವರ ಹಕ್ಕುಗಳ ರಕ್ಷಣೆಗಾಗಿ ಸಂಘಟನೆಗಳು ಶ್ರಮಿಸುತ್ತಿವೆ. ದಿನನಿತ್ಯದ ಬದುಕಿನಲ್ಲಿ ಕಷ್ಟಪಡುವ ಕಟ್ಟಡ ಕಾರ್ಮಿಕರು ಹಾಗೂ ಶ್ರಮಿಕ ವರ್ಗದವರಿಗೆ ನೆರವಾಗಲು ಉಚಿತವಾಗಿ ಗೃಹ ನಿರ್ಮಾಣ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ’ ಎಂದು ಹೇಳಿದರು.

ಬಡವರಿಗೆ ಸೂರಿನ ಸೌಲಭ್ಯ ಕಲ್ಪಿಸುವುದು ನಮ್ಮ ಸಂಘಟನೆ ಧ್ಯೇಯ. ಚಿಕ್ಕಬಳ್ಳಾಪುರವನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸುಮಾರು 600 ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎಂದರು.

ಕಾರ್ಮಿಕ ಸಂಘಟನೆಗಳ ಮುಖಂಡ ದೇವರಾಜ್, ಶಿವರೆಡ್ಡಿ, ವೆಂಕಟೇಶ, ರಾಮಕೃಷ್ಣಪ್ಪ, ಈಶ್ವರ ರೆಡ್ಡಿ, ಶ್ರೀನಾಥ್, ನಾರಾಯಣಸ್ವಾಮಿ, ಮುನೆಂದ್ರ ಬಾಬು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-16-1468646270

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.