ಚಿಂತಾಮಣಿ: ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಹುಡ್ಯ ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ತಂಬಾಳಪಲ್ಲಿ ತಾಲ್ಲೂಕಿನ ನವಾಬಕೋಟೆ ಗ್ರಾಮದ ಡಿ. ಮಂಜುನಾಥ, ಶ್ರೀರಾಮ, ಚೇಳೂರು ತಾಲ್ಲೂಕಿನ ದೇಶಮಾರಹಳ್ಳಿಯ ವೆಂಕಟರವಣಪ್ಪ ಮತ್ತು ಗಸರೆಡ್ಡಿ, ಕುರ್ಲಪಲ್ಲಿ ಗ್ರಾಮದ ಗಂಗುಲಪ್ಪ, ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕು ಗಾಂಡಹಳ್ಳಿಯ ಎನ್. ಶ್ರೀನಿವಾಸ, ಚಿಂತಾಮಣಿ ತಾಲ್ಲೂಕಿನ ಇರಗಂಪಲ್ಲಿ ಗ್ರಾಮದ ಅಂಜಪ್ಪ ಬಂಧಿತರು.

₹13,100 ನಗದು, 52 ಇಸ್ಪೀಟ್ ಎಲೆಗಳು ಹಾಗೂ ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-16-1867995427

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.