ಚಿಂತಾಮಣಿ: ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ನಡಂಪಲ್ಲಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಯುವಕರಿಬ್ಬರು ಗಾಂಜಾ ಸೇವಿಸಿ, ಮತ್ತಿನಲ್ಲಿ ವರ್ತಿಸುತ್ತಿದ್ದ ಮಾಹಿತಿ ದೊರೆತ ತಕ್ಷಣ, ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

ಶಿಡ್ಲಘಟ್ಟ ತಾಲ್ಲೂಕಿನ ಸಡ್ಲವಾರಹಳ್ಳಿಯ ಎಸ್.ನಾಗೇಶ, ಚೇಳೂರು ತಾಲ್ಲೂಕಿನ ಚಿಲಕಲನೇರ್ಪು ಗ್ರಾಮದ ಬಿ.ಖುರ್ಷಿದ್ ಬಂಧಿತರು.

ಚಿಂತಾಮಣಿಯ ಜೆ.ಜೆ. ಕಾಲೊನಿ ಬಳಿ ಅಪರಿಚಿತರಿಂದ ಗಾಂಜಾ ಖರೀದಿಸಿರುವುದಾಗಿ ಬಂಧಿತರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-18-775808715

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.