ಚಿಂತಾಮಣಿ: ವಿದ್ಯುತ್ ಪ್ರವಹಿಸುತ್ತಿದ್ದ ಮನೆಯ ಶೌಚಾಲಯದ ಕಬ್ಬಿಣದ ಬಾಗಿಲು ತೆರೆಯಲು ಹೋದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗುಂಡ್ಲಹಳ್ಳಿ ಗ್ರಾಮದ ರತ್ನಮ್ಮ (43) ಮೃತಪಟ್ಟಿವರು. ಮಧ್ಯಾಹ್ನ ಮಳೆ ಮುನ್ಸೂಚನೆ ಜೊತೆಗೆ ಜೋರಾದ ಗಾಳಿ ಬೀಸಿದಾಗ ಶೌಚಾಲಯದ ಮೇಲಿಂದ ಮನೆಗೆ ಹಾದು ಹೋಗಿದ್ದ ವಿದ್ಯುತ್ ತಂತಿ ತುಂಡಾಗಿ ಶೌಚಾಲಯದ ಮೇಲೆ ಅಳವಡಿಸಿದ ತಗಡಿನ ಶೀಟ್ಗಳ ಮೇಲೆ ಬಿದ್ದಿದೆ. ಈ ಮೂಲಕ ಕಬ್ಬಿಣದ ಬಾಗಿಲಿಗೂ ವಿದ್ಯುತ್ ಪ್ರವಹಿಸಿದ್ದರಿಂದಾಗಿ ಈ ಘಟನೆ ಸಂಭವಿಸಿದೆ.

ವಿದ್ಯುತ್ ತಗುಲಿ ಅಸ್ವಸ್ಥರಾಗಿ ಬಿದ್ದ ರತ್ನಮ್ಮ ಅವರನ್ನು ಅವರ ಗಂಡ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷಿಸಿದ ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-15-451746994

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.