ಚಿಂತಾಮಣಿ: ಆರ್ಥಿಕವಾಗಿ ಹಿಂದುಳಿದವರು ಹಾಗೂ ಗ್ರಾಮೀಣ ಭಾಗಗಳಲ್ಲಿ ವಾಸ ಮಾಡುವ ಬಹುತೇಕ ಜನರು ಅಪೌಷ್ಟಿಕತೆ, ಮಧುಮೇಹ, ರಕ್ತದೊತ್ತಡ ಮತ್ತಿತರ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ತಾಲ್ಲೂಕಿನಲ್ಲಿ ಒಟ್ಟಾರೆ 119 ಮಂದಿ ಕ್ಷಯರೋಗ ಪೀಡಿತರಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ಅಂಕಿಅಂಶಗಳಿಂದ ಗೊತ್ತಾಗಿದೆ.

ಸಾರ್ವಜನಿಕ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬರುವ ಹೊರರೋಗಿಗಳಲ್ಲಿ ಸಂಭಾವ್ಯ ಕ್ಷಯರೋಗಿಗಳನ್ನು ಗುರುತಿಸಿ ಕಫ ಪರೀಕ್ಷೆ ಮಾಡಲಾಗುತ್ತದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ರೋಗದ ಲಕ್ಷಣಗಳಿರುವವರು, ಮಧುಮೇಹಿಗಳು, ಧೂಮಪಾನಿಗಳು, ಎಚ್.ಐ.ವಿ ಸೋಂಕಿತರನ್ನು ಗುರುತಿಸಿ ಸಿವೈಟಿಬಿ ಮೂಲಕ ಪರೀಕ್ಷಿಸಲಾಗುತ್ತದೆ. ಕ್ಷಯರೋಗ ಸೋಂಕು ದೃಢಪಟ್ಟಲ್ಲಿ ಕ್ಷಯರೋಗ ನಿಯಂತ್ರಣ ಚಿಕಿತ್ಸೆ ನೀಡಲಾಗುತ್ತದೆ. ಕ್ಷಯರೋಗ ಹರಡುವ ಪ್ರಮಾಣ ಕಡಿಮೆ ಮಾಡಬಹುದು ಎನ್ನುತ್ತಾರೆ ಅಧಿಕಾರಿಗಳು.

ತಾಲ್ಲೂಕಿನಲ್ಲಿ 2025ರ ಜನವರಿಯಿಂದ ಡಿಸೆಂಬರ್ವರೆಗೆ 8,766 ಜನರ ಕಫ ಮಾದರಿಗಳ ಪರೀಕ್ಷೆ ನಡೆದಿದ್ದು, 330 ಕ್ಷಯರೋಗ ಪ್ರಕರಣಗಳು ದೃಢಪಟ್ಟಿವೆ. ಅದರಲ್ಲಿ 263 ಜನರು ಗುಣಮುಖರಾಗಿದ್ದು, 45 ಸಕ್ರಿಯ ಕ್ಷಯರೋಗ ಪ್ರಕರಣ ಗಳಿವೆ. 2026 ಜನವರಿಯಿಂದ ಏಪ್ರಿಲ್ವರೆಗೆ 2,733 ಮಂದಿಯ ಕಫ ಮಾದರಿಗಳ ಪರೀಕ್ಷೆ ನಡೆಸಲಾಗಿದ್ದು, 74 ಮಾದರಿಗಳಲ್ಲಿ ಕ್ಷಯರೋಗ ದೃಢಪಟ್ಟಿದೆ. ಜೀವನ ಶೈಲಿ, ಆಹಾರ ಪದ್ಧತಿ, ಬಡತನ, ಪೌಷ್ಟಿಕಾಂಶವುಳ್ಳು ಆಹಾರ ಕೊರತೆ ಕಾರಣದಿಂದ ಕ್ಷಯ ಸೇರಿದಂತೆ ಇನ್ನಿತರ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಅನೇಕ ಕ್ರಮ ಕೈಗೊಂಡರೂ, ರೋಗ ನಿಯಂತ್ರಣ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ತಾಲ್ಲೂಕಿನಲ್ಲಿ ಸಕ್ರಿಯ ಪ್ರಕರಣಗಳಿರುವ ಗ್ರಾಮಗಳನ್ನು ಗುರುತಿಸಿ, ಅವುಗಳ ಕಡೆಗೆ ಹೆಚ್ಚಿನ ಗಮನಹರಿಸಿದ್ದಾರೆ. ಕ್ಷಯ ಮುಕ್ತ ಭಾರತದ ಅಭಿಯಾನದಡಿ 100 ದಿನಗಳ ಕ್ಷಯರೋಗ ಪತ್ತೆ ಹಚ್ಚುವ ಆಂದೋಲನಕ್ಕೆ ಚಾಲನೆ ನೀಡಲಾಗಿದೆ. ಜನರನ್ನು ತಪಾಸಣೆಗೆ ಒಳಪಡಿಸಿ, ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಮಚಂದ್ರಾರೆಡ್ಡಿ ಪ್ರಜಾವಾಣಿಗೆ ತಿಳಿಸಿದರು.

ಕ್ಷಯರೋಗ ಲಕ್ಷಣಗಳು: ಕ್ಷಯರೋಗವು ‘ಮೈಕೋಬ್ಯಾಕ್ಟೀರಿಯಂ ಟ್ಯುಬರ್ ಕ್ಯುಲೋಸಿಸ್’ ಎಂಬ ರೋಗಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗ. ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಎರಡು ವಾರಗಳಿಗಿಂತ ಹೆಚ್ಚಿನ ಅವಧಿಯ ಕೆಮ್ಮು, ಜ್ವರ, ರಾತ್ರಿ ಬೆವರು, ಹಸಿವಾಗದಿರುವುದು, ತೂಕ ಕಡಿಮೆಯಾಗುವುದು, ಕೆಮ್ಮಿದಾಗ ಕಫದಲ್ಲಿ ರಕ್ತ ಬೀಳುವುದು, ದೇಹದಲ್ಲಿ ಗಂಟುಗಳು, ಆಯಾಸ, ಉಸಿರಾಡಲು ಕಷ್ಟವಾಗುವುದು, ಎದೆ ನೋವು ಬರುವುದು ರೋಗದ ಲಕ್ಷಣ.

ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳು: 2025ನೇ ಸಾಲಿನಲ್ಲಿ ತಾಲ್ಲೂಕಿನ 8 ಗ್ರಾಮ ಪಂಚಾಯಿತಿಗಳನ್ನು ‘ಕ್ಷಯಮುಕ್ತ ಗ್ರಾಮ ಪಂಚಾಯಿತಿ’ ಎಂದು ಘೋಷಿಸಲಾಗಿದೆ. ಕೆ.ರಾಗುಟ್ಟಹಳ್ಳಿ, ಕಡದನಮರಿ, ಇರಗಂಪಲ್ಲಿ, ಮಿಂಡಿಗಲ್, ಭೂಮಿಶೆಟ್ಟಹಳ್ಳಿ, ಬಟ್ಲಹಳ್ಳಿ,ಮಸ್ತೇನಹಳ್ಳಿ, ಪೆದ್ದೂರು ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳು. ಕಳೆದ ಮಾರ್ಚ್ನಲ್ಲಿ ಆಯೋಜಿಸಿದ್ದ ವಿಶ್ವ ಕ್ಷಯರೋಗ ದಿನಾಚರಣೆಯಂದು ಈ ಗ್ರಾಮ ಪಂಚಾಯಿತಿಗಳಿಗೆ ಪ್ರಮಾಣಪತ್ರ ವಿತರಿಸಲಾಗಿದೆ ಎಂದು ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಅಧಿಕಾರಿಯೊಬ್ಬರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-16-654096258

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.