ಚಿಂತಾಮಣಿ: ತಾಲ್ಲೂಕಿನ ಕಾಗತಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಎನ್ಆರ್ಡಿಎಸ್ ಆಶ್ರಯದಲ್ಲಿ ಬುಧವಾರ ರೈತರಿಗಾಗಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ರೈತರಿಗೆ ಆಧುನಿಕ ಕೃಷಿ ಪದ್ಧತಿಗಳ ಕುರಿತು ಮಾಹಿತಿ ನೀಡಲಾಯಿತು. ತೋಟಗಾರಿಕೆ ಇಲಾಖೆ ಪರವಾಗಿ ಎಚ್. ಬಾಲಕೃಷ್ಣ ಹಾಗೂ ಎನ್ಆರ್ಡಿಎಸ್ ಸಂಸ್ಥೆ ಪರವಾಗಿ ಕಿರಣ್ ರೈತರಿಗೆ ಮಾಹಿತಿ ನೀಡಿದರು.

ಐಐಎಚ್ಆರ್ ಪರವಾಗಿ ಆಗಮಿಸಿದ್ದ ಚೇತನ್, ಮಣ್ಣು ಪರೀಕ್ಷೆ ಹಾಗೂ ಕೃಷಿಯಲ್ಲಿ ಸಾವಯವ ಉತ್ಪನ್ನಗಳ ಬಳಕೆಯ ಮಹತ್ವದ ಕುರಿತು ರೈತರಿಗೆ ವಿವರಿಸಿ, ಸಾವಯವ ಗೊಬ್ಬರಗಳ ಬಳಕೆ ಮತ್ತು ವೈಜ್ಞಾನಿಕ ಮಣ್ಣು ಪರೀಕ್ಷೆ ಮೂಲಕ ರೈತರು ಹೇಗೆ ತಮ್ಮ ಇಳುವರಿ ಹೆಚ್ಚಿಸಿಕೊಳ್ಳಬಹುದು ಎಂಬ ಬಗ್ಗೆ ವಿವರಿಸಿದರು.

ರೈತರಿಗೆ ಹೊಂಗೆ ಹಿಂಡಿ, ಬೇವಿನ ಹಿಂಡಿ, ಮ್ಯಾಂಗೋ ಸ್ಪೆಷಲ್ ಒಳಗೊಂಡ ಕಿಟ್ ವಿತರಿಸಲಾಯಿತು. ರಾಜಣ್ಣ, ರಾಮಚಂದ್ರ, ಶಿಲ್ಪಾ, ಶ್ರೀನಿವಾಸ್, ಆಶಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-16-851969271

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.