ಚಿಂತಾಮಣಿ: ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರ ಎಡವಟ್ಟು ನಿರ್ಲಕ್ಷ್ಯದಿಂದ ಎರಡು ತಿಂಗಳ ಬಾಣಂತಿ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮೃತಳ ಸಂಬಂಧಿಕರು ಆರೋಪಿಸಿದ್ದಾರೆ.

ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದ ಓಬಳೇಶ್ ಎಂಬುವರ ಪತ್ನಿ ನರ್ಮದಾ (23) ಮೃತರು.

ವೈದ್ಯರ ಬೇಜವಾಬ್ದಾರಿತನದಿಂದಲೇ ನರ್ಮದಾ ಮೃತಪಟ್ಟಿದ್ದಾರೆ ಎಂದು ಆಕೆಯ ಪೋಷಕರು ಮತ್ತು ಗ್ರಾಮಸ್ಥರು ಆಸ್ಪತ್ರೆ ಮುಂದೆ ಶವವಿಟ್ಟು ರಾತ್ರಿಯಿಡೀ ಪ್ರತಿಭಟನೆ ನಡೆಸಿದರು. ಜೊತೆಗೆ ಈ ಘಟನೆಗೆ ಕಾರಣವಾದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಘೋಷಣೆಗಳನ್ನು ಕೂಗಿದರು. ಈ ವೇಳೆ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ನರ್ಮದಾ ಅವರು ಎರಡು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಎರಡು ದಿನಗಳ ಹಿಂದೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಭಾನುವಾರ ಶಸ್ತ್ರಚಿಕಿತ್ಸೆಯಾದ ಜಾಗದಲ್ಲಿ ಅತಿಯಾದ ನೋವು ಕಾಣಿಸಿಕೊಂಡಿತ್ತು. ಹೀಗಾಗಿ, ರಾತ್ರಿ ಮತ್ತೆ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

‘ಏಪ್ರಿಲ್ 24ರಂದು ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನರ್ಮದಾ ಅವರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿತ್ತು. ಡಾ. ವಾಣಿರೆಡ್ಡಿ ಶಸ್ತ್ರಚಿಕಿತ್ಸೆ ಮಾಡುವಾಗ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದ ಅನ್ನನಾಳದ ಕರುಳಿಗೆ ಕತ್ತರಿ ಹಾಕಿದ್ದಾರೆ. ನಂತರ ಕತ್ತರಿಸಿರುವ ಅನ್ನನಾಳದ ಜೋಡಣೆ ಚಿಕಿತ್ಸೆಯನ್ನು ಡಾ. ನಾರಾಯಣಸ್ವಾಮಿ ಮಾಡಿದ್ದಾರೆ. ಇದನ್ನು ನನಗೆ ಅಥವಾ ನನ್ನ ಪತ್ನಿ ಗಮನಕ್ಕೆ ತರದೆ ಮರೆಮಾಚಿದ್ದಾರೆ. ಸ್ಟ್ಯಾಫ್ ನರ್ಸ್ಗಳು ಈ ಬಗ್ಗೆ ಮಾತನಾಡಿಕೊಳ್ಳುವುದನ್ನು ನನ್ನ ಪತ್ನಿ ಕೇಳಿಸಿಕೊಂಡಿದ್ದಾಳೆ’ ಎಂದು ಮೃತಳ ಗಂಡ ಒಬಳೇಶ್ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಹೀಗಾಗಿ, ಡಾ. ವಾಣಿರೆಡ್ಡಿ ಮತ್ತು ಡಾ. ನಾರಾಯಣಸ್ವಾಮಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಬಂದ ನಗರ ಠಾಣೆ ಪೊಲೀಸರು, ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸಿದರು. ವೈದ್ಯರ ವಿರುದ್ಧ ಕ್ರಮಕೈಗೊಳ್ಳಬೇಕು ಹಾಗೂ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಕಾರರು ಪಟ್ಟು ಹಿಡಿದರು.

ಪೊಲೀಸರು ಪ್ರತಿಕ್ರಿಯಿಸಿ, ‘ಮೃತರ ಪತಿ ನೀಡಿದ ದೂರಿನ ಆಧಾರವಾಗಿ ಕ್ರಮ ಕೈಗೊಳ್ಲಲಾಗುವುದು. ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಹಿರಿಯ ವೈದ್ಯಾಧಿಕಾರಿಗಳಿಂದ ತನಿಖೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು. ಆಗ ಪ್ರತಿಭಟನಕಾರರು ಪ್ರತಿಭಟನೆ ಹಿಂಪಡೆದರು. ತಹಶೀಲ್ದಾರ್ ಸುದರ್ಶನ ಯಾದವ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-16-839093999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.