ಚಿಂತಾಮಣಿ: ಕಳೆದ ಭಾನುವಾರವಷ್ಟೇ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದ ಬಾಣಂತಿ ನರ್ಮದಾ ಅವರ 2 ತಿಂಗಳ ಮಗು ಗುರುವಾರ ಮೃತಪಟ್ಟಿದೆ. ತಾಯಿ ಮತ್ತು ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಈ ಕುರಿತು ಪ್ರತಿಕ್ರಿಯಿಸಿದ ನರ್ಮದಾ ಅವರ ಸೋದರ ನರಸಿಂಹಮೂರ್ತಿ, ವೈದ್ಯರ ನಿರ್ಲಕ್ಷ್ಯದಿಂದ ಮೇ 10ರಂದು ನನ್ನ ಸಹೋದರಿ ಮೃತಪಟ್ಟಿದ್ದರು. ತಾಯಿಗೆ ಸರಿಯಾದ ಚಿಕಿತ್ಸೆ ಸಿಗದ ಕಾರಣ 2 ತಿಂಗಳ ಮಗುವಿಗೆ ಸರಿಯಾದ ಪೋಷಣೆ ಸಿಗದೆ, ಮಗು ಮೃತಪಟ್ಟಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸಬೇಕು. ಡಾ. ವಾಣಿರೆಡ್ಡಿ ಹಾಗೂ ಇತರ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ್, ಮೃತಳ ಸಂಬಂಧಿಕರೊಂದಿಗೆ ಮಾತುಕತೆ ನಡೆಸಿದರು. ಇದೊಂದು ದುರದೃಷ್ಟಕರ ಘಟನೆ. ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಕರುಳಿಗೆ ಗಾಯವಾಗಿದ್ದು, ಹಿರಿಯ ಶಸ್ತ್ರಚಿಕಿತ್ಸಕರಿಂದ ಸರಿಪಡಿಸಲಾಗಿತ್ತು. ಈ ಕುರಿತು ಮೂರು ಹಂತದ ತನಿಖೆ ನಡೆಯುತ್ತಿದೆ ಎಂದರು.

ಮರಣೋತ್ತರ ವರದಿ, ಲೋಕಾಯುಕ್ತ ತನಿಖೆ, ಇಲಾಖಾ ಮಟ್ಟದ ತನಿಖೆ ಮತ್ತು ಪೊಲೀಸ್ ಇಲಾಖೆ ವರದಿಯ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇವೆ ಎಂದು ಡಾ.ಮಹೇಶ್ ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-16-1060626520

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.