ಚಿಂತಾಮಣಿ: ನಗರದ ಸಾರ್ವಜನಿಕ ಸ್ಥಳದಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಎನ್.ಎನ್.ಟಿ ರಸ್ತೆ ನಿವಾಸಿ ಪ್ರಸಾದ್ ಬಂಧಿತ ಆರೋಪಿ.

ಆಶ್ರಯ ಬಡಾವಣೆ ಕಡೆಗೆ ಹೋಗುವ ಮುಖ್ಯ ರಸ್ತೆಯ ಫಿಲ್ಟರ್ ಬೆಡ್ ಸರ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬುದಾಗಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ವೆಂಕಟಗಿರಿಕೋಟೆ ಕಡೆ ಗಸ್ತಿನಲ್ಲಿದ್ದ ಸಬ್ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದಾಗ 3-4 ಜನ ಕುಳಿತು ಮದ್ಯ ಸೇವಿಸುತ್ತಿದ್ದರು. ಪೊಲೀಸರನ್ನು ನೋಡುತ್ತಲೇ ಮದ್ಯ ಸೇವಿಸುತ್ತಿದ್ದವರು ಅಲ್ಲಿಂದ ಓಡಿ ಹೋಗಿದ್ದಾರೆ. ಆದರೆ ಮದ್ಯ ನೀಡುತ್ತಿದ್ದ ಪ್ರಸಾದ್ನನ್ನು ಬಂಧಿಸಲಾಗಿದೆ ಎಂದಿದ್ದಾರೆ ಪೊಲೀಸರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-16-292924244

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.