ಚಿಂತಾಮಣಿ: ‘ತಾಲ್ಲೂಕಿನಲ್ಲಿ ದೊಡ್ಡ ಮಟ್ಟದಲ್ಲಿ ಕೈಗಾರಿಕೆ ಬರಬೇಕು. ಕೃಷಿಯನ್ನು ಉಳಿಸಿ ಪ್ರೋತ್ಸಾಹಿಸಬೇಕು ಜತೆಗೆ ಅಂತರ್ಜಲ ವೃದ್ಧಿಗೊಳಿಸುವ ಯೋಜನೆಗಳಿಗೆ ಪ್ರಾಶಸ್ತ್ಯ ನೀಡಲಾಗುತ್ತಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕುರುಬೂರಿನ ಕೃಷಿ ವಿಜ್ಞಾನ ಕೇಂದ್ರ ಹಾಗೂ ಪಶು ಸಂಗೋಪನಾ ಇಲಾಖೆ ಆಶ್ರಯದಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ರೈತರಿಗೆ ಮೇವು ಕತ್ತರಿಸುವ ಯಂತ್ರ, ಸ್ಪ್ರೇಯರ್, ಕೃಷಿ ಸಲಕರಣೆ ವಿತರಿಸಿ ಮಾತನಾಡಿದರು.

‘ಕ್ಷೇತ್ರದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಸಾವಿರಾರು ಜನರಿಗೆ ಉದ್ಯೋಗ ದೊರೆಯುತ್ತದೆ. ಸುತ್ತಮುತ್ತಲ ಪ್ರದೇಶಗಳ ಜನರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅನುಕೂಲವಾಗುತ್ತದೆ. ಜನರ ಸಾಮಾಜಿಕ ಮತ್ತು ಆರ್ಥಿಕ ಜೀವನ ಮಟ್ಟ ಸುಧಾರಣೆಯಾಗುತ್ತದೆ. ಭೂಮಿಯ ಬೆಲೆಯೂ ಏರಿಕೆಯಾಗುತ್ತದೆ. ಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ದೊರೆಯುವುದರಿಂದ ಆರ್ಥಿಕ ಸ್ಥಿರತೆ ಕಾಣಬಹುದು’ ಎಂದರು.

‘ಕೈಗಾರಿಕೆಗಳ ಸ್ಥಾಪನೆಯ ಜತೆಗೆ ಕೃಷಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೂ ಪ್ರೋತ್ಸಾಹ ನೀಡಲಾಗುತ್ತಿದೆ. ಕ್ಷೇತ್ರದಲ್ಲಿ ವರ್ಷ ವರ್ಷವೂ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು ಅಂತರ್ಜಲ ಪಾತಾಳಕ್ಕೆ ಕುಸಿದಿದೆ. ಇದೇ ರೀತಿ ಮುಂದುವರೆದರೆ ಕೆಲವೇ ವರ್ಷಗಳಲ್ಲಿ ಹನಿ ನೀರಿಗೂ ಪರದಾಡಬೇಕಾಗುತ್ತದೆ. ಕೆರೆಗಳಿಗೆ ನೀರು ತುಂಬಿಸಿ ಅಂತರ್ಜಲ ವೃದ್ಧಿಸಲು ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದರೆ ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ’ ಎಂದರು.

‘ಈ ಯೋಜನೆಗಳ ನೀರು ಕೇವಲ ಅಂತರ್ಜಲ ವೃದ್ಧಿಗಾಗಿ ಮಾತ್ರ, ಕುಡಿಯುವ ನೀರಿಗಾಗಿ ಅಲ್ಲ ಎಂದು ಪದೇ ಪದೇ ಖಚಿತಪಡಿಸಿದರೂ ಕೆಲವರು ಪ್ರಚಾರ ಮತ್ತು ದಿಡೀರ್ ನಾಯಕರಾಗಲು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಕೆಲವು ಕಡೆ ಒಳಚರಂಡಿ ನೀರು ಕೆರೆಗೆ ಸೇರುತ್ತಿರುವುದರಿಂದ ನೀರು ಮಲಿನವಾಗುತ್ತಿದೆ’ ಎಂದರು.

‘ಎಚ್.ಎನ್. ವ್ಯಾಲಿಯಿಂದ 119 ಕೆರೆಗಳಿಗೆ ನೀರು ಹರಿಸುವ ಯೋಜನೆಯ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ. ಕೆ.ಸಿ.ವ್ಯಾಲಿಯ ಎರಡನೇ ಹಂತದಲ್ಲಿ 56 ಕೆರೆಗಳಿಗೆ ನೀರು ಹರಿಸುವ ಕಾಮಗಾರಿ ಪ್ರಗತಿಯಲ್ಲಿದ್ದು 2-3 ತಿಂಗಳಲ್ಲಿ ಕೆರೆ ತುಂಬಲಿವೆ. ದೇವನಹಳ್ಳಿ ಮತ್ತು ಜಕ್ಕೂರು ಬಳಿ ಎಚ್.ಎನ್.ವ್ಯಾಲಿ ನೀರನ್ನು ಮರುಶುದ್ಧೀಕರಿಸಿ ನಗರಸಭೆಯ ಕುಡಿಯುವ ನೀರಿನ ಸಂಪರ್ಕಕ್ಕೆ ಜೋಡಿಸಲಾಗಿದೆ. ಅನಗತ್ಯ ಟೀಕೆ ಮಾಡುವವರು ಅಲ್ಲಿಗೇ ಭೇಟಿ ನೀಡಿ ಕಣ್ಣಾರೆ ನೋಡಿ ಬನ್ನಿ’ ಎಂದರು.

‘ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು 350 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಸಾರ್ವಜನಿಕ ಆಸ್ಪತ್ರೆಯನ್ನು ಮೂರನೇ ಅಂತಸ್ತಿಗೆ ವಿಸ್ತರಿಸಿ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನಾಗಿ ಅಭಿವೃದ್ಧಿಪಡಿಸುವುದು ಬಹುದೊಡ್ಡ ಕನಸಾಗಿದೆ. ಹೊಸದಾಗಿ ನಿರ್ಮಾಣವಾಗುತ್ತಿರುವ ಕ್ರಿಟಿಕಲ್ ಕೇರ್ ಆಸ್ಪತ್ರೆಯಿಂದ ಬಡವರಿಗೆ ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಸಿಗುವಂತೆ ಮಾಡುವುದು ಮುಖ್ಯ ಉದ್ದೇಶ’ ಎಂದರು.

‘ಆಸ್ಪತ್ರೆಗಳ ಜತೆಗೆ ವೈದ್ಯಕೀಯ ಕಾಲೇಜು ಸ್ಥಾಪನೆಯ ಚಿಂತನೆಯೂ ಇದೆ. ಕಾಲೇಜು ಸ್ಥಾಪನೆಗೆ ಅಗತ್ಯವಾದ ಭೂಮಿ ಗುರುತಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳ ಉತ್ತಮ ನಿರ್ವಹಣೆಗಾಗಿ ಖಾಸಗಿ ಸಹಭಾಗಿತ್ವದ ಆಲೋಚನೆ ಇದೆ. ಕೆಲವರು ಅದಕ್ಕೂ ತಕರಾರು ಅರ್ಜಿ ಸಲ್ಲಿಸಿ ಪ್ರಗತಿಗೆ ಅಡ್ಡಿಪಡಿಸುತ್ತಿದ್ದಾರೆ. ಯಾವುದೇ ಅಪಪ್ರಚಾರ, ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ’ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮುನಿನಾರಾಯಣಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆರ್.ಶ್ರೀನಾಥಬಾಬು, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಎಂ.ಪಾಪಿರೆಡ್ಡಿ, ಇಒ ಎಸ್.ಆನಂದ್, ಪೌರಾಯುಕ್ತ ಜಿ.ಎನ್.ಚಲಪತಿ, ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ವೀರರಾಜು, ಶಿಶು ಅಭಿವೃದ್ಧಿ ಯೋಜನಾಧಿಕರಿ ಮಹೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-16-1170459106

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.