ಚಿಂತಾಮಣಿ: ತಾಲ್ಲೂಕಿನ ದೊಡ್ಡಗಂಜೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡದವಾಡಿ ಗ್ರಾಮದಲ್ಲಿ ಮಂಗಳವಾರ ಕಲ್ಯಾಣಿ ಸ್ವಚ್ಛತೆ ಅಭಿಯಾನವನ್ನು ಕೈಗೊಳ್ಳಲಾಯಿತು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ್ ಮಾತನಾಡಿ, ‘ಜಿಲ್ಲೆಯಲ್ಲಿನ ಪುರಾತನ ಕಲ್ಯಾಣಿಗಳನ್ನು ಸ್ವಚ್ಛಗೊಳಿಸುವ ಮೂಲಕ ನೀರಿನ ಮೂಲಗಳನ್ನು ಸಂರಕ್ಷಮೆ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಅವರ ಸೂಚನೆಯಂತೆ ವಿವಿಧ ಇಲಾಖೆಗಳ ಸಮನ್ವಯತೆಯೊಂದಿಗೆ ಕಲ್ಯಾಣಿಗಳ ಸ್ವಚ್ಛತೆ ಅಭಿಯಾನ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ ಸಹಯೋಗದೊಂದಿಗೆ 16 ಕಲ್ಯಾಣಿಗಳ ಸ್ವಚ್ಛತೆ ಕೈಗೆತ್ತಿಕೊಳ್ಳಲಾಗಿದೆ. ಗ್ರಾಮಸ್ಥರು ಸಹ ಸಹಕಾರ ನೀಡುತ್ತಿದ್ದಾರೆ. ಸ್ವಚ್ಛಗೊಳಿಸಿದ ಕಲ್ಯಾಣಿಯನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಲಾಗುತ್ತದೆ. ಮುಂದೆ ಗ್ರಾಮಸ್ಥರು ಅದೇ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚೌಡರೆಡ್ಡಿ ಮಾತನಾಡಿ, ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳ ಸ್ವಚ್ಛತೆ ಮತ್ತು ಅಭಿವೃದ್ಧಿಗಾಗಿ ಸಚಿವ ಡಾ. ಎಂ.ಸಿ.ಸುಧಾಕರ್ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಗ್ರಾಮಸ್ಥರು ಕೈಜೋಡಿಸುವ ಮೂಲಕ ಸ್ವಚ್ಛತೆ ಮತ್ತು ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.

ತಾಲ್ಲೂಕಿನಲ್ಲಿರುವ ಪುರಾತನ ಕಾಲದ ಐತಿಹಾಸಿಕ ಕೆರೆ, ಕುಂಟೆ, ಕಲ್ಯಾಣಿಗಳ ಸ್ವಚ್ಛತೆ ಮತ್ತು ಅಭಿವೃದ್ಧಿಗಾಗಿ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶೇಷ ಅಂದೋಲನ ರೂಪಿಸಲಾಗಿದೆ. ಸಚಿವರು ವಿವಿಧ ಮೂಲಗಳಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಗೆ ಪಣತೊಟ್ಟಿದ್ದಾರೆ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಸಹಾಯಕ ನಿರ್ದೇಶಕಿ ಕವಿತಾ, ಕೃಷಿಕ ಸಮಾಜದ ಅಧ್ಯಕ್ಷ ಜಯರಾಮರೆಡ್ಡಿ, ಆರೋಗ್ಯ ಇಲಾಖೆಯ ಡಾ.ಪೂರ್ಣಿಮಾ, ಗ್ರಾ.ಪಂ.ಆಡಳಿತಾಧಿಕಾರಿ ಪ್ರತಿಭಾ, ಅಭಿವೃದ್ಧಿ ಅಧಿಕಾರಿ ಹರೀಶ್, ಕಾರ್ಯದರ್ಶಿ ವೆಂಕಟರಮಣಪ್ಪ, ತಾ.ಪಂ.ಸಿಬ್ಬಂದಿ, ನರೇಗಾ ಎಂಜನಿಯರ್ಗಳು, ವಿವಿಧ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-16-254252288

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.