ಚಿಂತಾಮಣಿ: ತಾಲ್ಲೂಕಿನ ಚೇಳೂರು ರಸ್ತೆ ಕನಿಶೆಟ್ಟಹಳ್ಳಿ ಕ್ರಾಸ್ ಬಳಿ ಶನಿವಾರ ಬಟ್ಲಹಳ್ಳಿ ಠಾಣೆ ಪೊಲೀಸ್ ಜೀಪ್ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಟಗಲ್ ನಿವಾಸಿ ಮುನಿಯಪ್ಪ(33) ಮೃತರು. ಸಬ್ ಇನ್ ಸ್ಪೆಕ್ಟರ್ ನಾರಾಯಣಸ್ವಾಮಿ ಮತ್ತು ಜೀಪ್ ಚಾಲಕ ವಿಜಯಕುಮಾರ್ ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಮುನಿಯಪ್ಪ ಕೋಟಗಲ್‌ನಿಂದ ದ್ವಿಚಕ್ರ ವಾಹನದಲ್ಲಿ ಕೂಲಿ ಕೆಲಸಕ್ಕಾಗಿ ಚಿಂತಾಮಣಿಗೆ ಬರುತ್ತಿದ್ದರು. ಕನಿಶೆಟ್ಟಹಳ್ಳಿ ಕ್ರಾಸ್ ಬಳಿ ಎರಡು ವಾಹನಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚೆಂಚಾರ್ಲಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.