ಚಿಂತಾಮಣಿ: ನಗರದ ರಾಯಲ್ ವೃತ್ತದ ಕಟ್ಟಡ ಕಾರ್ಮಿಕರ ಕಚೇರಿಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಜಿ. ಗೀತಾಂಜಲಿ ಮಾತನಾಡಿ, ‘ಕಾರ್ಮಿಕದ ದಿನಾಚರಣೆಯು ಕೇವಲ ವೇದಿಕೆ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕಾರ್ಮಿಕರ ಪಾಲಿಗೆ ಜ್ಞಾನಾರ್ಜನೆಯ ವೇದಿಕೆಯಾಗಬೇಕು’ ಎಂದು ಪ್ರತಿಪಾದಿಸಿದರು.

ದೇಶದ ಪ್ರಗತಿಗೆ ಬೆನ್ನೆಲುಬು ಆಗಿರುವ ಕಾರ್ಮಿಕರ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ವಿದ್ಯಾಭ್ಯಾಸದ ಕೊರತೆಯಿಂದ ತಳಮಟ್ಟದ ಕಾರ್ಮಿಕರು ಇಂದಿಗೂ ಸಂಘಟಿತರಾಗದೆ ಉಳಿದಿರುವುದು ವಿಷಾದನೀಯ. ಮಹಿಳಾ ಕಾರ್ಮಿಕರು ಹಕ್ಕುಗಳ ಬಗ್ಗೆ ಸರಿಯಾದ ಮಾಹಿತಿ ಹೊಂದಿಲ್ಲದ ಕಾರಣ ದೌರ್ಜನ್ಯ ಮತ್ತು ದಬ್ಬಾಳಿಕೆಗೆ ತುತ್ತಾಗುತ್ತಿದ್ದಾರೆ. ಕಾನೂನು ನಮಗೆ ಹಕ್ಕುಗಳನ್ನು ನೀಡಿದರೂ, ಅರಿವಿನ ಕೊರತೆಯಿಂದ ಅವುಗಳನ್ನು ಪಡೆದುಕೊಳ್ಳಲು ಕಾರ್ಮಿಕರು ಪರದಾಡುತ್ತಿದ್ದಾರೆ ಎಂದರು.

ಕಾರ್ಮಿಕ ಇಲಾಖೆ ನಿರೀಕ್ಷಕಿ ಕಲಾವಾಣಿ ಮಾತನಾಡಿ, ನೈಜ ಕಾರ್ಮಿಕರು ಕಡ್ಡಾಯವಾಗಿ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡು ಗುರುತಿನ ಚೀಟಿ ಪಡೆಯಬೇಕು. ಇದರಿಂದ ಇಲಾಖೆಯಿಂದ ಸಿಗುವ ಎಲ್ಲ ಸೌಲಭ್ಯಗಳು ತಲುಪಲು ಸಾಧ್ಯವಾಗುತ್ತದೆ ಎಂದರು.

ವಕೀಲ ದಯಾನಂದ್ ಮತ್ತು ಮುನಿರಾಜು ಅವರು ಕಾರ್ಮಿಕ ಕಾಯ್ದೆಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ನಿವೃತ್ತ ಮುಖ್ಯೋಪಾಧ್ಯಾಯ ಜಗನ್ನಾಥ್ ಮತ್ತು ಬೆಸ್ಕಾಂ ನಿವೃತ್ತ ಅಧಿಕಾರಿ ನಾಗರಾಜ್ ಕಾರ್ಮಿಕರ ಸುರಕ್ಷತಾ ಕ್ರಮಗಳ ಬಗ್ಗೆ ತಿಳಿಸಿಕೊಟ್ಟರು.

ವಕೀಲ ವಿ.ರಮೇಶ್, ಕೆ.ಎ.ರಮೇಶ್, ಭಾರತಿ, ವಿಜಯ್, ಶ್ರೀನಿವಾಸ್, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ್, ಗೌರವಾಧ್ಯಕ್ಷ ಶ್ರೀನಿವಾಸ್, ಕಾರ್ಯಾಧ್ಯಕ್ಷ ಸುರೇಶ್ ಮತ್ತು ಪದಾಧಿಕಾರಿಗಳು ಹಾಗೂ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-16-907188168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.