ಚಿಂತಾಮಣಿ: ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚಿಂತಾಮಣಿ ತಾಲ್ಲೂಕು ಘಟಕದಿಂದ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎನ್. ಕದಿರೇಗೌಡ, ‘ಸಚಿವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವವರು ಒಂದೆಡೆ ಕೈಗಾರಿಕೆ ಬೇಡ ಎನ್ನುತ್ತಾರೆ. ಇನ್ನೊಂದೆಡೆ ಅಭಿವೃದ್ಧಿ ಬೇಕು ಎನ್ನುತ್ತಾರೆ. ಇಂತಹ ನಿಲುವುಗಳ ಮೂಲಕ ಸಾರ್ವಜನಿಕರನ್ನು ಹಾದಿ ತಪ್ಪಿಸಲಾಗುತ್ತಿದೆ. ರೈತರ ಹೆಸರಿನಲ್ಲಿ ದ್ವಿಮುಖ ನೀತಿ ಅನುಸರಿಸುತ್ತಿರುವ ಭೂಮಾಫಿಯಾದವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಜಂಗಮಕೋಟೆ ವ್ಯಾಪ್ತಿಯಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಗುರುತಿಸಲಾಗಿದ್ದ 2,823 ಎಕರೆ ಭೂಮಿಯಲ್ಲಿ, ಸುಮಾರು 550 ಎಕರೆ ಕೃಷಿ ಭೂಮಿಯನ್ನು ಕೈಬಿಡುವಂತೆ ರೈತರು ಮನವಿ ಮಾಡಿದ್ದರು. ರೈತರ ಹಿತದೃಷ್ಟಿಯಿಂದ ಸಚಿವ ಡಾ.ಎಂ.ಸಿ.ಸುಧಾಕರ್, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಲೋಚನೆ ನಡೆಸಿ 550 ಎಕರೆ ಕೃಷಿ ಭೂಮಿಯನ್ನು ಕೈಬಿಟ್ಟು ಆದೇಶಿಸಿದ್ದಾರೆ ಎಂದರು.

ಏಪ್ರಿಲ್ 29ರಂದು ನಡೆದ ಪ್ರತಿಭಟನೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಬಣದವರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಸಂಘಟನೆ ಖಂಡಿಸುತ್ತದೆ ಎಂದರು.

ರಾಜ್ಯ ವಲಯ ಘಟಕದ ಅಧ್ಯಕ್ಷ ರಘುನಾಥರೆಡ್ಡಿ ಮಾತನಾಡಿ, ಭೂ ಮಾಫಿಯಾದವರು ಮತ್ತು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಶಾಂತಿಯುತ ವಾತಾವರಣವನ್ನು ಕೆಡಿಸುತ್ತಿದ್ದು, ಅಂತಹವರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎ. ಪ್ರತೀಶ್, ಹುಸೇನ್ ಸಾಬಿ, ಬಿ.ಕೆ ಮುನಿಕೆಂಪಣ್ಣ, ವೆಂಕಟೇಶಪ್ಪ, ನಾರಾಯಣಮೂರ್ತಿ, ಅಂಜನಪ್ಪ, ರಮೇಶ್, ನರಸಿಂಹಮೂರ್ತಿ, ಶ್ರೀರಾಮರೆಡ್ಡಿ, ನಾಗರಾಜ್, ರಾಮಚಂದ್ರರೆಡ್ಡಿ, ನಾರಾಯಣಸ್ವಾಮಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-16-1054963492

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.