ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಂತಾಮಣಿ: ರಕ್ತದೊತ್ತಡ ಕುಸಿದು ಉಪನ್ಯಾಸಕಿ ಸಾವು

ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಅಸ್ವಸ್ಥಗೊಂಡಿದ್ದರು
Published : 13 ಆಗಸ್ಟ್ 2023, 13:04 IST
Last Updated : 13 ಆಗಸ್ಟ್ 2023, 13:04 IST
ಫಾಲೋ ಮಾಡಿ
Comments

ಚಿಂತಾಮಣಿ: ತಾಲ್ಲೂಕಿನ ಕೈವಾರ ಹೋಬಳಿ ಮಸ್ತೇನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಆಂಗ್ಲಭಾಷೆ ಉಪನ್ಯಾಸಕಿಯಾಗಿದ್ದ ನೀಲಾಂಬಿಕೆ(35) ಶನಿವಾರ ಸಂಜೆ ಕರ್ತವ್ಯನಿರತರಾಗಿದ್ದಾಗಲೇ ಮೃತಪಟ್ಟಿದ್ದಾರೆ. 

ವಿದ್ಯಾರ್ಥಿನಿಯರ ಜೊತೆಯಿರುವಾಗಲೇ ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಅಸ್ವಸ್ಥಗೊಂಡ ಅವರನ್ನು ಕೈವಾರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗೆ ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದಾರೆ ಎಂದು ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ. 

ಮೂಲತಃ ಬೀದರ್ ಜಿಲ್ಲೆಯ ಕಮಲನಗರದವರಾದ ನೀಲಾಂಬಿಕೆ ನೀಲಾಂಬಿಕೆ 2021ರ ಜುಲೈ 13ರಂದು ಉಪನ್ಯಾಸಕಿಯಾಗಿ ಸೇವೆ ಆರಂಭಿಸಿದ್ದರು. ಬೀದರ್‌ನಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ನೇಮಕಗೊಂಡಿದ್ದ ಅವರು ವಸತಿ ಕಾಲೇಜಿನಲ್ಲೇ ವಾಸವಾಗಿದ್ದರು. ಮೃತರಿಗೆ ಮದುವೆಯಾಗಿದ್ದು, ಪತಿಯನ್ನು ಅಗಲಿದ್ದಾರೆ. 

ಭಾನುವಾರ ಶವ ಪರೀಕ್ಷೆ ನಡೆಸಿ, ಪಾರ್ಥಿವ ಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಬೀದರ್‌ಗೆ ಕಳುಹಿಸಿಕೊಡಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮುನಿರೆಡ್ಡಿ ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT