ಚಿಂತಾಮಣಿ: ತಾಲ್ಲೂಕಿನ ಮುಂಗಾನಹಳ್ಳಿ ಹೋಬಳಿ ಮಿಂಡಿಗಲ್ ಗ್ರಾಮದ ಸರ್ವೆ ನಂ 32ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗದವರಿಗೆ ಕಾಯ್ದಿರಿಸಿದ ಸ್ಮಶಾನ ಜಾಗ ಮಂಜೂರು ಮಾಡಿಕೊಡಲು ಅನೇಕ ಬಾರಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು.

ಆದರೆ, ಗ್ರಾಮದ ಯರ್ರಪ್ಪ ರೆಡ್ಡಿ ಎಂಬುವರು ರಾತ್ರೋರಾತ್ರಿ ಆ ಸ್ಮಶಾನದ ಜಾಗದಲ್ಲಿ ಉಳಿಮೆ ಮಾಡಿ, ಜಮೀನು ತನ್ನದು ಎಂದು ಹೇಳಿ ಸರ್ಕಾರಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಗ್ರಾಮದ ಜಯರಾಮರೆಡ್ಡಿ ದೂರು ನೀಡಿದ್ದರು. ಹಿಂದೆ ಸರ್ವೆ ಮಾಡಲು ಬಂದ ಅಧಿಕಾರಿಗಳಿಗೆ ಅಡ್ಡಿಪಡಿಸಲಾಗಿತ್ತು. ಇದರಿಂದಾಗಿ ಅಧಿಕಾರಿಗಳು ಸರ್ವೆ ಮಾಡದೆ, ವಾಪಸ್ ಹೋಗಿದ್ದರು.

ಮಂಗಳವಾರ ಸರ್ವೆ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಾಯದೊಂದಿಗೆ ಸರ್ವೆ ನಂ 32ರಲ್ಲಿ 3 ಎಕರೆ ಜಮೀನು ಸಂಪೂರ್ಣವಾಗಿ ಸರ್ವೆ ಮಾಡಿ ಜೆಸಿಬಿ ಮೂಲಕ ಗುರುತು ಮಾಡಿದರು. ಇದರೊಂದಿಗೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ಮಶಾನ ಜಾಗ ಸಮಸ್ಯೆ ಇತ್ಯರ್ಥವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳವರಿಗೆ ತುಂಬಾ ಅನುಕೂಲವಾಗಿದೆ ಎಂದು ಜಯರಾಮರೆಡ್ಡಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-16-246548609

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.