ಚಿಂತಾಮಣಿ: ತಾಲ್ಲೂಕಿನ ಮುರಗಮಲ್ಲ ಗ್ರಾಮದ ಯುವತಿಯೊಬ್ಬಳು ನಿಗೂಢವಾಗಿ ನಾಪತ್ತೆಯಾಗಿದ್ದು, ಅಪಹರಣವಾಗಿರುವ ಶಂಕೆ ವ್ಯಕ್ತವಾಗಿದೆ.

ಮುರಗಮಲ್ಲ ಗ್ರಾಮದ ನಿವಾಸಿ ತಸ್ಮಿಯಾ ಬಾನು ನಾಪತ್ತೆಯಾದ ಯುವತಿ. ಮೇ 10ರಂದು ಬೆಳಗ್ಗೆ 10 ಗಂಟೆ ನಂತರ ಪೋಷಕರು ಕೆಲಸಕ್ಕೆ ತೆರಳಿದ್ದರು. ಸಂಜೆ ಪೋಷಕರು ಕೆಲಸ ಮುಗಿಸಿ ಮನೆಗೆ ಬಂದಾಗ ಮಗಳು ಮನೆಯಲ್ಲಿ ಇಲ್ಲದಿರುವುದು ಕಂಡುಬಂದಿದೆ. ಇದರಿಂದ ಆತಂಕಗೊಂಡ ಪೋಷಕರು ಸುತ್ತಮುತ್ತಲಿನ ಮನೆಗಳು, ಇಡೀ ಗ್ರಾಮ ಮತ್ತು ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದರೂ, ಯುವತಿ ಸುಳಿವು ಸಿಕ್ಕಿಲ್ಲ. ಹೀಗಾಗಿ, ಯುವತಿ ಪೋಷಕರು ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಗಳ ಹುಡುಕಾಟದಲ್ಲಿ ನಿರತರಾಗಿದ್ದರಿಂದಾಗಿ ದೂರು ನೀಡುವುದು ವಿಳಂಬವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಗಳ ನಾಪತ್ತೆ ಹಿಂದೆ ಫಾಜಿಲ್ ಮತ್ತು ಜಾರಾ ಎಂಬುವರ ಕೈವಾಡ ಇರಬಹುದು ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರ ಮೊಬೈಲ್ ಸಂಖ್ಯೆಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-16-1886176274

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.