ಚಿಂತಾಮಣಿ: ನಗರದ ತಾಲ್ಲೂಕು ಕಚೇರಿ ವೃತ್ತದ ಬಳಿ ಸೋಮವಾರ ತಮ್ಮ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಗೊಳಗಾದ ಪೊಲೀಸ್ ಕಾನ್ಸ್ಟೆಬಲ್ ಸುನೀಲ್ ಕುಮಾರ್ ನಗರಠಾಣೆಯಲ್ಲಿ ದೂರು ನೀಡಿದ್ದಾರೆ.

ರಾಜೇಶ್ ಕುಮಾರ್ ಹಲ್ಲೆ ನಡೆಸಿದ ಆರೋಪಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಗರ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟ, ಮಟ್ಕಾ ಬಗ್ಗೆ ಮಾಹಿತಿ ಸಂಗ್ರಹಿಸಲು ಹಾಗೂ ಶಾಲಾ ಕಾಲೇಜುಗಳ ಬಳಿ ಹೆಣ್ಣುಮಕ್ಕಳಿಗೆ ತೊಂದರೆ ಕೊಡುವವರ ಮೇಲೆ ನಿಗಾ ವಹಿಸಲು ತಮ್ಮನ್ನು ನಿಯೋಜಿಸಲಾಗಿತ್ತು. ತಾಲ್ಲೂಕು ಕಚೇರಿ ವೃತ್ತದ ಬಳಿ ಗಸ್ತು ತಿರುಗುತ್ತಿದ್ದಾಗ ವ್ಯಕ್ತಿಯೊಬ್ಬ ದ್ವಿಚಕ್ರ ವಾಹನವನ್ನು ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದ. ಆತನನ್ನು ತಡೆದು ತಿಳಿವಳಿಕೆ ಹೇಳುತ್ತಿದ್ದಾಗ, ಮತ್ತೊಂದು ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿ ಏಕಾಏಕಿ ಅಶ್ಲೀಲ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಜೊತೆಗೆ ಎಳನೀರು ಮಾರುತ್ತಿದ್ದವರ ಬಳಿ ಇದ್ದ ಮಚ್ಚು ಹಿಡಿದು, ಝಳಪಿಸುತ್ತಾ, ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಕಾನ್ಸ್ಟೆಬಲ್ ತಿಳಿಸಿದ್ದಾರೆ.

‘ಆಗ ನಾನು ಕರ್ತವ್ಯನಿರತ ಪೊಲೀಸ್ ಎಂದರೂ, ನನ್ನನ್ನು ಬಿಡದೆ, ಪ್ರಾಣ ಬೆದರಿಕೆ ಹಾಕಿದ್ದಾನೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಘಟನಾ ಸ್ಥಳಕ್ಕೆ ಬರುತ್ತಿದ್ದಂತೆ, ಆ ವ್ಯಕ್ತಿ ಪರಾರಿಯಾಗಿದ್ದಾನೆ. ಆತ ಟ್ಯಾಂಕ್ ಬಂಡ್ ನಿವಾಸಿ ರಾಜೇಶ್ ಕುಮಾರ್ ಎಂಬುದು ಗೊತ್ತಾಗಿದೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಸಿಬ್ಬಂದಿ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-16-707265490

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.