ಚಿಂತಾಮಣಿ: ಸಾರ್ವಜನಿಕರು ಬಾಕಿ ಇರುವ ಆಸ್ತಿ ತೆರಿಗೆಯನ್ನು ಸಕಾಲದಲ್ಲಿ ಪಾವತಿಸುವ ಮೂಲಕ ನಗರಸಭೆಯೊಂದಿಗೆ ಕೈಜೋಡಿಸಬೇಕು ಎಂದು ಚಿಂತಾಮಣಿ ನಗರಸಭೆ ಪೌರಾಯುಕ್ತ ಜಿ.ಎನ್. ಚಲಪತಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆಸ್ತಿ ತೆರಿಗೆ ಪಾವತಿದಾರರಿಗೆ ಶೇ 5ರಷ್ಟು ರಿಯಾಯಿತಿ ಸೌಲಭ್ಯವನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ಅವಕಾಶವನ್ನು ಬಳಸಿಕೊಂಡು ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದರು.

ನಗರದ ವಿವಿಧ ವಾರ್ಡ್ಗಳಲ್ಲಿರುವ ಖಾಲಿ ನಿವೇಶನಗಳಲ್ಲಿ ಕಸ ಸುರಿಯಲಾಗುತ್ತಿದೆ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ನಿವೇಶನ ಮಾಲೀಕರು ಕೂಡಲೇ ತಮ್ಮ ಜಾಗವನ್ನು ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ ನಗರಸಭೆ ಸ್ವಚ್ಛಗೊಳಿಸಿ ಅದರ ವೆಚ್ಚವನ್ನು ತೆರಿಗೆಯಲ್ಲಿ ಸೇರಿಸಲಿದೆ ಎಂದರು.

ನಗರದ ರಸ್ತೆ ಕಾಮಗಾರಿ, ಯುಜಿಡಿ ಕಾಮಗಾರಿ ನಡೆಯುತ್ತಿದೆ. ಸಾರ್ವಜನಿಕರು ಹೊಸದಾಗಿ ನಿರ್ಮಿಸಿದ ರಸ್ತೆ ಅಗೆಯಬಾರದು. ನಗರದ ಹೃದಯಭಾಗದಲ್ಲಿರುವ ಹಳೆಯ ಐಡಿಎಸ್ಎಂಟಿ ವಾಣಿಜ್ಯ ಸಂಕೀರ್ಣ ಶಿಥಿಲಗೊಂಡಿದೆ. ಅದನ್ನು ತೆರವುಗೊಳಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-16-785891769

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.