ಚಿಂತಾಮಣಿ: ನಗರದ ವ್ಯಾಪ್ತಿಯಲ್ಲಿ ರಸ್ತೆಗಳ ಡಾಂಬರೀಕರಣ ಬಿರುಸಿನಿಂದ ನಡೆಯುತ್ತಿದೆ. ಎನ್.ಎನ್.ಟಿ ರಸ್ತೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ ಭೇಟಿ ನೀಡಿ ಪರಿಶೀಲಿಸಿದರು.

ನಗರದ ಸೌಂದರ್ಯೀಕರಣ ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಸ್ಥಳದಲ್ಲಿದ್ದ ಗುತ್ತಿಗೆದಾರರು ಮತ್ತು ಎಂಜಿನಿಯರ್ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಎನ್.ಎನ್.ಟಿ ರಸ್ತೆ ಕಾಮಗಾರಿ ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಸಾರ್ವಜನಿಕರು ಅಭಿವೃದ್ಧಿ ಕೆಲಸಗಳಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ನಗರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಮನೆ ಮನೆಯಿಂದ ಕಸ ಸಂಗ್ರಹ ಮಾಡುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ. ಸಾರ್ವಜನಿಕರು ರಸ್ತೆ ಬದಿ ಕಸ ಹಾಕದೆ ನಗರಸಭೆ ವಾಹನಗಳಿಗೆ ನೀಡಬೇಕು ಎಂದರು.

ಬೇಸಿಗೆ ಹಿನ್ನೆಲೆಯಲ್ಲಿ ನಗರದ ಕೆಲವು ಭಾಗಗಳಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಲಾಗಿದೆ. ಹೊಸ ಕೊಳವೆ ಬಾವಿಗಳ ಕೊರೆಯುವಿಕೆ ಮತ್ತು ಪೈಪ್ಲೈನ್ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ನಗರದ ಅಭಿವೃದ್ಧಿ ಕೇವಲ ನಗರಸಭೆಯಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ. ತೆರಿಗೆ ಸಕಾಲದಲ್ಲಿ ಪಾವತಿಸುವ ಮೂಲಕ ನಗರದ ಪ್ರಗತಿಗೆ ಕೈಜೋಡಿಸಬೇಕು ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಾಥ್ ಬಾಬು, ಮುಖಂಡರಾದ ಶೇಕ್ ಸಾದಿಕ್ ರಜ್ವಿ, ಸೈಯದ್ ಸಿಕಂದರ್, ಇಮ್ತಿಯಾಜ್ ಪಾಷಾ, ಅನ್ಸರ್, ನವಾಬ್, ಸಿಲ್ಕ್ ಬಾಬು, ಇನಾಯತ್ ಪಾಷಾ, ಸೈಯದ್ ರಫಿಕ್, ಮುಕ್ತಿಯಾರ್ ಸೇರಿದಂತೆ ನಗರಸಭೆಯ ಹಿರಿಯ ಅಧಿಕಾರಿಗಳು ಹಾಗೂ ವಾರ್ಡ್ಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-16-994003652

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.