ಚಿಂತಾಮಣಿ: ಚಿಂತಾಮಣಿ-ಶ್ರಿನಿವಾಸಪುರ ರಸ್ತೆಯ ಬೂರಗಮಾಕಲಹಳ್ಳಿ ಗೇಟ್ ಬಳಿ ಶುಕ್ರವಾರ ಮೂರು ಬೈಕ್ಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಮೂವರು ಬೈಕ್ ಸವಾರರು ಗಾಯಗೊಂಡಿದ್ದಾರೆ.

ತಾಲ್ಲೂಕಿನ ಕಸಬಾ ಹೋಬಳಿಯ ಆನೂರು ಗ್ರಾಮದ ನರಸಿಂಹಪ್ಪ, ವೆಂಕಟೇಶ್, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದ ಶಶಾಂಕ್ ಗಾಯಗೊಂಡವರು. ಅವರು ನಗರದ ಸಾರ್ವಜನಿಕ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನರಸಿಂಹಪ್ಪ ಮತ್ತು ವೆಂಕಟೇಶ್ ತಮ್ಮ ಬೈಕ್ಗಳ ಹಿಂಬದಿಯಲ್ಲಿ ಕೊತ್ತುಂಬರಿ ಮೂಟೆಗಳನ್ನು ಹಾಕಿಕೊಂಡು ನಗರದ ಎಪಿಎಂಸಿ ಮಾರುಕಟ್ಟೆಗೆ ಬರುತ್ತಿದ್ದರು. ಶಶಾಂಕ್ ಬೈಕ್ನಲ್ಲಿ ಚಿಂತಾಮಣಿಯಿಂದ ಶ್ರೀನಿವಾಸಪುರ ಕಡೆಗೆ ಹೋಗುತ್ತಿದ್ದರು. ಬೂರಗಮಾಕಲಹಳ್ಳಿ ಗೇಟ್ ಬಳಿ ಮೂರು ಬೈಕ್ಗಳು ಪರಸ್ಪರ ಡಿಕ್ಕಿ ಹೊಡೆದಿವೆ.

ಮೂವರು ಸವಾರರು ಬೈಕ್ ಸಮೇತ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ಕೂಡಲೇ 108 ಆ್ಯಂಬುಲೆನ್ಸ್ಗೆ ಕರೆ ಮಾಡಿ ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದರು. ಮೂರು ಬೈಕ್ಗಳು ಜಖಂಗೊಂಡಿವೆ. ವಿಷಯ ಗೊತ್ತಾದ ಕೂಡಲೇ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿ ಬಿದ್ದಿದ್ದ ಬೈಕ್ಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-16-1508774987

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.