ಚಿಂತಾಮಣಿ: ತಾಲ್ಲೂಕಿನ ಕಸಬಾ ಹೋಬಳಿಯ ಕೆ.ಕುರುಪ್ಪಲ್ಲಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಬೆಳಿಗ್ಗೆ ಶಿಕ್ಷಕರೊಬ್ಬರು ಮಕ್ಕಳಿಗೆ ಪಾಠ ಮಾಡುತ್ತಿರುವ ಸಮಯದಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಟಿ.ಕೆ.ಮಂಜುನಾಥ್(48) ಮೃತಪಟ್ಟ ಶಿಕ್ಷಕ. ಅವರು ಮನೆಯಿಂದ ಬೆಳಿಗ್ಗೆ 8 ಗಂಟೆಗೆ ಶಾಲೆಗೆ ಹೋಗಿದ್ದರು. 9 ಗಂಟೆ ಸಮಯದಲ್ಲಿ ತರಗತಿಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿರುವಾಗ ಕುಸಿದುಬಿದ್ದಿದ್ದಾರೆ. ಸಹಶಿಕ್ಷಕರು ಹಾಗೂ ಗ್ರಾಮಸ್ಥರು ಕೂಡಲೇ ನಗರದ ಡೆಕ್ಕನ್ ಆಸ್ಪತ್ರೆಗೆ ಕರೆತಂದಿದ್ದಾರೆ. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ನಗರದ ಆಶ್ರಯ ಬಡಾವಣೆ ಸಮೀಪದ ಅವರ ಮನೆಯಲ್ಲಿ ಮಧ್ಯಾಹ್ನದವರೆಗೆ ಸಾರ್ವಜನಿಕ ದರ್ಶನಕ್ಕಾಗಿ ಇಡಲಾಗಿತ್ತು. ಮಧ್ಯಾಹ್ನದ ನಂತರ ಅವರ ಸ್ವಗ್ರಾಮ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೋಟಪಲ್ಲಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.