ಚಿಂತಾಮಣಿ: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕೆಎಸ್ಆರ್ಟಿಸಿ ಘಟಕದ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.

ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶೆ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್. ಶಕುಂತಲಾ ಮಾತನಾಡಿ, ‘ಅವಿದ್ಯಾವಂತರಿಗಿಂತ ವಿದ್ಯಾವಂತರೇ ಹೆಚ್ಚು ತಂಬಾಕು ಸೇವನೆ ಮಾಡುತ್ತಿರುವುದು ಬೇಸರದ ಸಂಗತಿ’ ಎಂದು ಹೇಳಿದರು.

ಸಾರ್ವಜನಿಕರಲ್ಲಿ ಧೂಮಪಾನ ಮತ್ತು ತಂಬಾಕು ಮುಕ್ತ ಸಮಾಜದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ತಂಬಾಕು ರಹಿತ ದಿನವನ್ನು ಅರ್ಥಪೂರ್ಣವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.

ಸಾರಿಗೆ ಸಂಸ್ಥೆ ಚಾಲಕರು ಮತ್ತು ನಿರ್ವಾಹಕರು ವಾಹನ ಚಾಲನೆ ಮಾಡುವಾಗ ತಮಗೆ ನಿದ್ದೆ ಬಾರದಂತೆ ತಡೆಯಲು ತಂಬಾಕನ್ನು ವ್ಯಾಪಕವಾಗಿ ಬಳಸುತ್ತಾರೆ ಎನ್ನಲಾಗುತ್ತದೆ. ಈ ಕ್ಷಣಿಕ ಹವ್ಯಾಸದಿಂದ ಕ್ಯಾನ್ಸರ್ ಸೇರಿದಂತೆ ವಿವಿಧ ಮಾರಣಾಂತಿಕ ಕಾಯಿಲೆಗಳು ಆವರಿಸಿಕೊಳ್ಳುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ತಂಬಾಕು ಹಾಗೂ ಸಿಗರೇಟ್ ಪಾಕೆಟ್ಗಳ ಮೇಲೆ ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಶಾಸನಬದ್ಧ ಎಚ್ಚರಿಕೆಯನ್ನು ಸ್ಪಷ್ಟವಾಗಿ ಮುದ್ರಿಸಿದ್ದರೂ, ಓದಿಕೊಂಡವರೇ ತಂಬಾಕು ಸೇವನೆಗೆ ದಾಸರಾಗುತ್ತಿರುವುದು ದುರದೃಷ್ಟಕರ ಎಂದರು.

ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಸವ ಮಂಜೇಶ್ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು ಕುರಿತು ಉಪನ್ಯಾಸ ನೀಡಿದರು. ನಿರ್ವಾಹಕರು, ಚಾಲಕರು ಮತ್ತು ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಘಟಕದ ವ್ಯವಸ್ಥಾಪಕಿ ಸರಿತಾ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಚಂದ್ರರೆಡ್ಡಿ, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಶಿವಾನಂದ ಹಾಗೂ ಪದಾಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-16-1464962819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.