ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿಯ ಮುರುಗಮಲ್ಲ ಬಳಿ ಭೀಕರ ಅಪಘಾತ: 12 ಜನ ಸಾವು

Last Updated 3 ಜುಲೈ 2019, 8:41 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಬಳಿ ಬುಧವಾರ ಬೆಳಿಗ್ಗೆ ಖಾಸಗಿ ಬಸ್ ಮತ್ತು ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿದ್ದು,ಟಾಟಾ ಏಸ್ ನಲ್ಲಿದ್ದ 12 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಖಾಸಗಿ ಬಸ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದೆ ಎಂಬುದು ಮೇಲ್ನೊಟಕ್ಕೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಚಿಂತಾಮಣಿ ಮತ್ತು ಕೋಲಾರದ ಸರ್ಕಾರಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಬಸ್ ನಲ್ಲಿದ್ದವರ ಪೈಕಿ 8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT