ಚಿಕ್ಕಬಳ್ಳಾಪುರ: ‘ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆಯನ್ನು (ಕೋಟ್ಪಾ) ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಎಲ್ಲಾ ನಗರಸಭೆ ಹಾಗೂ ಪಟ್ಟಣ ಪಂಚಾಯಿತಿ ಕಸ ವಿಲೇವಾರಿ ವಾಹನಗಳಲ್ಲಿ ತಂಬಾಕು ನಿಷೇಧದ ಬಗ್ಗೆ ಧ್ವನಿವರ್ಧಕಗಳಲ್ಲಿ ಪ್ರಚಾರ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು’ ಎಂದು ಹೇಳಿದರು.

‘ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿ, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ, ಟೀ ಸ್ಟಾಲ್, ಕಾಂಡಿಮೆಂಟ್ಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ನಾಮಫಲಕಗಳನ್ನು ಅಳವಡಿಸಿಕೊಳ್ಳುವ ಜತೆಗೆ ಬಿಡಿ ಬಿಡಿಯಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ನಗರಸಭೆ ಹಾಗೂ ಪುರಸಭೆ ವ್ಯಾಪಾರದ ಪರವಾನಗಿ ನೀಡುವಾಗ ಕೋಟ್ಪಾ ಕಾಯ್ದೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದರು.

‘ಸಾರ್ವಜನಿಕ ಶಿಕ್ಷಣ ಅಧಿಕಾರಿಗಳು ಶೈಕ್ಷಣಿಕ ಸಂಸ್ಥೆಗಳಲ್ಲಿ ಕೋಟ್ಪಾ- ಕಾಯ್ದೆಯ ಅನ್ವಯ ನಾಮಫಲಕ ಅಳವಡಿಸಬೇಕು. ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ಧ್ವನಿವರ್ಧಕಗಳ ಮುಖಾಂತರ ತಂಬಾಕು ನಿಯಂತ್ರಣದ ಬಗ್ಗೆ ಪ್ರಚಾರ ಮಾಡಬೇಕು. ತಾಲ್ಲೂಕು ತನಿಖಾ ದಳ ಸದಸ್ಯರ ಕಾರ್ಯಾಚರಣೆ ವೇಳೆ ಅದರಲ್ಲಿ ಸಂಬಂಧಪಟ್ಟ ಠಾಣೆಯ ಪಿಎಸ್ಐ ಅಥವಾ ಎಸ್ಐ ಕಡ್ಡಾಯವಾಗಿ ಭಾಗವಹಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಕೆ.ಬಾಬು ರೆಡ್ಡಿ ಮಾತನಾಡಿ, ‘ಎಚ್ಚರಿಕೆ ಚಿತ್ರ ಇಲ್ಲದ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಶಾಲಾ ಕಾಲೇಜು ಆವರಣದಲ್ಲಿ ತಂಬಾಕು ಮಾರಾಟ ಮಾಡುವುದು ಕಂಡುಬಂದರೆ ಅಂತಹವರ ವಿರುದ್ಧ ದಂಡ ವಿಧಿಸಿ ತಂಬಾಕು ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಗಿದೆ’ ಎಂದರು.

‘ಈಗಾಗಲೇ ಈ ಕುರಿತು ಜಿಲ್ಲೆಯಲ್ಲಿ ಏಪ್ರಿಲ್ ನಿಂದ ಜೂನ್ ಅಂತ್ಯದವರೆಗೆ ಸೆಕ್ಷನ್ 4ರ ಅಡಿಯಲ್ಲಿ ಒಟ್ಟು 554 ಪ್ರಕರಣಗಳನ್ನು ದಾಖಲಿಸಿದ್ದು, ₹33.16 ಸಾವಿರ ದಂಡ ವಸೂಲಿ ಮಾಡಲಾಗಿದೆ. ಸೆಕ್ಷನ್ 6ರಡಿಯ್ಲಲಿ 70 ಪ್ರಕರಣಗಳನ್ನು ದಾಖಲಿಸಿದ್ದು, ₹4,220 ದಂಡ, ಸೆಕ್ಷನ್ 6ಬಿ ಅಡಿಯಲ್ಲಿ 19 ಪ್ರಕರಣ ದಾಖಲಿಸಿ, ₹1,600 ದಂಡ ವಸೂಲಿ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಆರೋಗ್ಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.