ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: 23ರಂದು ಸಂಸದ ಕಚೇರಿ ಚಲೋ

ಸಿಐಟಿಯು ನೇತೃತ್ವದಲ್ಲಿ ಪೂರ್ವಭಾವಿ ಸಭೆ
Published 6 ಜನವರಿ 2024, 15:40 IST
Last Updated 6 ಜನವರಿ 2024, 15:40 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿಐಟಿಯು ನೇತೃತ್ವದಲ್ಲಿ ಜ.23ರಂದು ಅಂಗನವಾಡಿ ನೌಕರರು ಮತ್ತು ಸಿಬ್ಬಂದಿ ಜಿಲ್ಲಾ ಕೇಂದ್ರಗಳಲ್ಲಿನ ಸಂಸದ ಕಚೇರಿ ಚಲೋ ಹಮ್ಮಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಸಂಘಟನೆಗಳ ಮುಖಂಡರು ಶನಿವಾರ ಪೂರ್ವಭಾವಿ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ‘ಆಹಾರ, ಆರೋಗ್ಯ ಮತ್ತು ಶಿಕ್ಷಣ ಉಳಿಸಿ ದೇಶವನ್ನು ಅಭಿವೃದ್ಧಿಪಡಿಸಬೇಕು. ಸಮಾನ ವೇತನ ನಿಗದಿಪಡಿಸಿ ಶ್ರಮಿಕರ ಬದುಕನ್ನು ಉಳಿಸಬೇಕು ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಅನುದಾನ ಹೆಚ್ಚಿಸಬೇಕು ಎಂದು ಆಗ್ರಹಿಸಿ ಸಂಸದರ ಕಚೇರಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದರು.

23ರಂದು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರ ಕಚೇರಿ ಚಲೋ ನಡೆಸಲಾಗುವುದು. ಕನಿಷ್ಠ ಕೂಲಿ ₹ 31 ಸಾವಿರ ಆಗಬೇಕು. ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯ ಪ್ರಕಾರ ಅಂಗನವಾಡಿ ನೌಕರರಿಗೆ ₹ 15 ಸಾವಿರ, ಬಿಸಿಯೂಟ ನೌಕರರಿಗೆ ₹ 6 ಸಾವಿರ ವೇತನ ನೀಡಬೇಕು. ನಿವೃತ್ತಿ ಸೌಲಭ್ಯ ಜಾರಿಮಾಡಬೇಕು. ವಿದ್ಯುತ್, ರೈಲ್ವೆ ಸೇರಿದಂತೆ ಸಾರ್ವಜನಿಕ ವಲಯವು ಖಾಸಗೀಕರಣ ಆಗಬಾರದು ಎಂದು ಒತ್ತಾಯಿಸಿದರು.

ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಇ–ಶ್ರಮ್ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬ ಸದಸ್ಯರಿಗೆ ಉಚಿತ ಶಿಕ್ಷಣ, ಆರೋಗ್ಯ, ಪಡಿತರ ಹಾಗೂ ವಸತಿ ಸೌಲಭ್ಯ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದ ಮಾತನಾಡಿ, ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹಲವು ಹೋರಾಟಗಳನ್ನು ನಡೆಸಿದ್ದೇವೆ. ಆದರೆ ಸರ್ಕಾರಗಳು ಸ್ಪಂದಿಸುತ್ತಿಲ್ಲ. ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಇಲಾಖೆಯೇತರ ಕೆಲಸಗಳಿಗೆ ಅಂಗನವಾಡಿ ನೌಕರರನ್ನು ಬಳಕೆ ಮಾಡಿಕೊಳ್ಳಬಾರದು. ಅಕ್ಷರ ದಾಸೋಹ ಯೋಜನೆಯನ್ನು ಶಿಕ್ಷಣ ಇಲಾಖೆಯ ಅಡಿಯಲ್ಲಿ ತರಬೇಕು ಎಂದುರ.

ಜಿಲ್ಲಾ ಕಾರ್ಯದರ್ಶಿ ರತ್ನ, ಖಜಾಂಚಿ ವೆಂಕಟಲಕ್ಷ್ಮಿ, ಸೌಭಾಗ್ಯಮ್ಮ, ಅಶ್ವತ್ಥಮ್ಮ, ಮುನಿರತ್ನಮ್ಮ, ಶಾಂತಮ್ಮ, ಗೀತಾ, ರಾಧ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT