ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ಆರೋಗ್ಯ ರಕ್ಷಣೆಗೆ ಮುಂದಾಗಲಿ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ
Last Updated 23 ಜುಲೈ 2020, 16:49 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಪ್ರತಿ ನಾಗರಿಕರಿಗೆ ಕೋವಿಡ್ ಉಚಿತ ಚಿಕಿತ್ಸೆ, ಎಲ್ಲ ಕುಟುಂಬಗಳಿಗೆ ಮಾಸಿಕ ನೆರವು ಕಲ್ಪಿಸಬೇಕು. ನಗರದ ಜನರಿಗೆ ನರೇಗಾ ಕೆಲಸ ನೀಡಬೇಕು ಎಂದು ಒತ್ತಾಯಿಸಿ, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್(ಸಿಐಟಿಯು), ಕರ್ನಾಟಕ ಪ್ರಾಂತ ರೈತ ಸಂಘ, ಪ್ರಾಂತ ಕೃಷಿ ಕೂಲಿಕಾರರ ಸಂಘ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ
ನಡೆಯಿತು.

ಪ್ರಾಂತ ಕೃಷಿಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ದೇಶದ ಆರ್ಥಿಕ, ಕೃಷಿ ಬಿಕ್ಕಟ್ಟು ಎದುರಿಸುತ್ತಿದೆ. ಇದೀಗ ಕೊರೊನಾ ಸಂಕಷ್ಟ ಎದುರಾಗಿದೆ. ಜನರ ಆರ್ಥಿಕ ಪರಿಸ್ಥಿತಿ ಹಾಗೂ ಆರೋಗ್ಯ ರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮುಂದಾಗಬೇಕು. ಜನರಿಗೆ ನೆರವಾಗುವ ಬದಲು ಕಾರ್ಪೊರೇಟ್ ಕಂಪನಿಗೆ ಲೂಟಿ ಮಾಡಲು ನೆರವು ಕಲ್ಪಿಸುತ್ತಿರುವುದು ಖಂಡನೀಯ ಎಂದರು.

ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ವಿಶೇಷ ಪ್ಯಾಕೇಜ್‌ಗಳನ್ನು ಸರ್ಕಾರ ಘೋಷಿಸಬೇಕು. ಜನಪರ ಕಾಯ್ದೆಗಳನ್ನು ಜಾರಿ ಮಾಡಬೇಕು. ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ಸಂಸ್ಥೆಗಳ ಖಾಸಗೀಕರಣವನ್ನು ತಡೆಯಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀರಾಮನಾಯಕ್, ಸಿಐಟಿಯು ತಾಲ್ಲೂಕು ಅಧ್ಯಕ್ಷ
ಬಿ.ಆಂಜನೇಯರೆಡ್ಡಿ, ಕಾರ್ಯದರ್ಶಿ ಜಿ.ಮುಸ್ತಫಾ, ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಎ.ಶ್ರೀರಾಮಪ್ಪ, ಪ್ರಾಂತ ಕೃಷಿಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯೆ ಬಿ.ಸಾವಿತ್ರಮ್ಮ, ಎಸ್‌ಎಫ್‌ಐ ತಾಲ್ಲೂಕು ಅಧ್ಯಕ್ಷ ಸತೀಶ್, ಮುಖಂಡ ಹೇಮಚಂದ್ರ, ಮುನಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT