ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟ: ಸ್ವಚ್ಛತೆ ಅರಿವಿಗೆ ಬೀದಿನಾಟಕ

Last Updated 6 ಮಾರ್ಚ್ 2021, 3:23 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ‘ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಲು ಪೌರಕಾರ್ಮಿಕರಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ನಿಮ್ಮ ಮನೆ ಅಥವಾ ಅಂಗಡಿಗಳ ತ್ಯಾಜ್ಯವನ್ನು ರಸ್ತೆಯಲ್ಲಿ ಸುರಿಯಬಾರದು’ ಎಂದು ಪೌರಾಯುಕ್ತ ಶ್ರೀನಿವಾಸ್ ತಿಳಿಸಿದರು.

ನಗರದ ಬಸ್ ನಿಲ್ದಾಣದ ಬಳಿ ಶುಕ್ರವಾರ ಸ್ವಚ್ಛತೆಯ ಕುರಿತು ಜನಜಾಗೃತಿ ಮೂಡಿಸಲು ಪರಿವರ್ತನಾ ಕಲಾ ಸಂಸ್ಥೆಯ ಮೂಲಕ ಆಯೋಜಿಸಿದ್ದ ಬೀದಿ ನಾಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಗರ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ತರವಾಗಿದ್ದು, ಅವರ ಸೇವೆಯನ್ನಿಲ್ಲಿ ಸ್ಮರಿಸಲಾಗಿದೆ. ಜೊತೆಗೆ ಜನರು ಯಾವ ರೀತಿಯಲ್ಲಿ ತಮ್ಮ ಜವಾಬ್ದಾರಿ ನಿರ್ವಹಿಸಬೇಕು, ಕಸದ ವಾಹನ ಬಂದಾಗ ಮನೆಯ ಕಸವನ್ನು ಯಾವ ರೀತಿಯಲ್ಲಿ ವಿಂಗಡಿಸಿ ನೀಡಬೇಕು ಎಂಬುದರ ಜೊತೆಗೆ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವುದು, ನೈರ್ಮಲ್ಯ ಜಾಗೃತಿ ಮೂಡಿಸುವುದರ ಕುರಿತು ನಾಟಕದ ಮೂಲಕ ಹೇಳಲಾಗುತ್ತಿದೆ’ ಎಂದರು.

ನಾಗರಿಕರು ಮನೆಯಲ್ಲಿ ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಬೇಕು. ರಸ್ತೆಯಲ್ಲಿ ಕಸಕಡ್ಡಿ ಅಥವಾ ತ್ಯಾಜ್ಯವನ್ನು ಸುರಿದರೆ ಅದನ್ನು ಮನೆಯ ಮುಂದೆ ಅಥವಾ ಅಂಗಡಿಯ ಮುಂದೆ ಡಂಪ್ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಆರೋಗ್ಯ ನಿರೀಕ್ಷಕಿ ಶೋಭಾ, ನೀರು ಸರಬರಾಜು ವಿಭಾಗದ ಮುರಳಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT