ಬುಧವಾರ, ಏಪ್ರಿಲ್ 21, 2021
25 °C

ಸರ್ಕಾರಿ ಜಮೀನು ಒತ್ತುವರಿ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ : ತಾಲ್ಲೂಕಿನ ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳುವನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನಿನ ಒತ್ತುವರಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು. ಸರ್ವೆ ನಂ.215ರಲ್ಲಿ 24 ಗುಂಟೆ ಜಮೀನನ್ನು ವಶಪಡಿಸಿಕೊಂಡಿದ್ದಾರೆ.

ತಹಶೀಲ್ದಾರ್ ರಾಜೀವ್ ಅವರ ಮಾರ್ಗದರ್ಶನದಲ್ಲಿ ಜಂಗಮಕೋಟೆ ನಾಡ ಕಚೇರಿಯ ಉಪ ತಹಶೀಲ್ದಾರ್ ನಾಗರಾಜ್, ಪಿಡಿಓ ಅರುಣಾಕುಮಾರಿ ಅವರು ಪೋಲಿಸರ ಸಹಕಾರದಿಂದ ಕಾರ್ಯಚರಣೆ ನಡೆಸಿ ಗೋಮಾಳವನ್ನು ಸಂರಕ್ಷಣೆ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ದೇವರಾಜ್, ಉಪಾಧ್ಯಕ್ಷ ನಾರಾಯಣಸ್ವಾಮಿ, ಪಿಡಿಓ ಅರುಣಾಕುಮಾರಿ, ಗ್ರಾಮ ಪಂಚಾಯಿತಿ ಸದಸ್ಯ ಮಿತ್ತನಹಳ್ಳಿ ಹರೀಶ್, ವೆಂಕಟಾಪುರ ನಾಗೇಶ್ ಇದ್ದರು.

ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ಶ್ರೀಧರ್, ಗ್ರಾಮ ಸಹಾಯಕ ವೆಂಕಟೇಶ್, ಭೂಮಾಪಕ ಚಂದ್ರಶೇಖರ್ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು