ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟದಲ್ಲಿ 16ಕ್ಕೆ ಸ್ಪರ್ಧೆಗಳು

Last Updated 10 ಫೆಬ್ರುವರಿ 2021, 4:24 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಕ್ರೀಡೆಗಳು ದೈಹಿಕ ಹಾಗೂ ಮಾನಸಿಕವಾಗಿ ಸ್ಫೂರ್ತಿ ತುಂಬುತ್ತದೆ. ಸರ್ಕಾರಿ ನೌಕರರು ತಮ್ಮ ಕಾರ್ಯಕ್ರಮಗಳ ಒತ್ತಡದಿಂದಾಗಿ ಕುಗ್ಗಿರುತ್ತಾರೆ. ವರ್ಷಕ್ಕೊಮ್ಮೆ ಬರುವ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಕ್ರಿಯಾಶೀಲತೆ ಹೊಂದಲು ಸಾಧ್ಯ ಎಂದು ತಹಶೀಲ್ದಾರ್ ಬಿ.ಎಸ್. ರಾಜೀವ್ ತಿಳಿಸಿದರು.

ನೌಕರರ ಸಂಘದ ಕ್ರೀಡಾ ಕೂಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯವಾಗಿದ್ದು ತಮ್ಮ ಕಾಯಕದಲ್ಲಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕೆಂದು ಹೇಳಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಫೆ.16ರ ಮಂಗಳವಾರದಂದು ಶಾಸಕ ವಿ.ಮುನಿಯಪ್ಪ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಲಿದ್ದಾರೆ. ಪುರುಷರು ಮತ್ತು ಮಹಿಳೆಯರಿಗಾಗಿ ಅಥ್ಲೆಟಿಕ್ಸ್, ಗುಂಪು ಆಟಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು ಎಲ್ಲಾ ಸರ್ಕಾರಿ ನೌಕರರು ಪಾಲ್ಗೊಳ್ಳಲು ಕರೆ ನೀಡಿದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಮಾತನಾಡಿ, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಸರ್ಕಾರಿ ನೌಕರರಿಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಒಒಡಿ ಸೌಲಭ್ಯವಿದ್ದು ಅರ್ಹ ಕ್ರೀಡಾಕೂಟಗಳು ಇದರ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸುವ ಸ್ಪರ್ಧಿಗಳು ಕೋವಿಡ್-19 ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಟಿ. ವಿಜಯ್‌ಕುಮಾರ್, ಕ್ರೀಡಾ ಕಾರ್ಯದರ್ಶಿ ಟಿ.ಟಿ.ನರಸಿಂಹಪ್ಪ, ಸಾಂಸ್ಕೃತಿಕ ಕಾರ್ಯದರ್ಶಿ ಎಸ್‌.ಎ.ಪ್ರಶಾಂತ್, ಗಜೇಂದ್ರ, ಆರ್‌ಆರ್ ಶಿರಸ್ತೇದಾರ್ ಕೆ.ಎನ್.ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT