ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರೆ ಹಾವು ಪ್ರದರ್ಶನ: ಜಗ್ಗಿ ವಾಸುದೇವ್ ವಿರುದ್ಧ ದೂರು

Last Updated 15 ಅಕ್ಟೋಬರ್ 2022, 19:36 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ:ಕೇರೆ ಹಾವುಕೈಯಲ್ಲಿ ಹಿಡಿದು ಪ್ರದರ್ಶಿಸಿದ ಈಶಾ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಕ್ರಮ ಜರುಗಿಸುವಂತೆ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ(ಎಸ್‌ಪಿಸಿಎ) ಜಿಲ್ಲಾ ಸಮಿತಿ ಸದಸ್ಯ ಸಿ.ಎನ್.ಪೃಥ್ವಿರಾಜ್ ಅವರು ಚಿಕ್ಕಬಳ್ಳಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ.ಎಸ್‌ಪಿಸಿಎ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಅವರ ಗಮನಕ್ಕೂ ಈವಿಷಯವನ್ನು ತಂದಿದ್ದಾರೆ.

ತಾಲ್ಲೂಕಿನ ಜಾಲಾರಿ ನರಸಿಂಹಸ್ವಾಮಿ ಬೆಟ್ಟದ ಬಳಿಯ ಈಶಾ ಯೋಗ ಕೇಂದ್ರದಲ್ಲಿ ಅ.9 ಮತ್ತು 10ರಂದು ನಡೆದ ಕಾರ್ಯಕ್ರಮದಲ್ಲಿ ಜಗ್ಗಿ ವಾಸುದೇವ್ ಅವರು ಕೇರೆ ಹಾವನ್ನು ಅಕ್ರಮವಾಗಿ ಹಿಡಿದು ಪ್ರದರ್ಶಿಸಿದ್ದಾರೆ. ಈ ವೇದಿಕೆಯ ಮುಂಭಾಗದಲ್ಲಿ ಅಪಾರ ಸಂಖ್ಯೆಯ ಜನರು ಸೇರಿದ್ದರು. ವೇದಿಕೆಯಲ್ಲಿ ಕಣ್ಣು ಕೋರೈಸುವ ವಿದ್ಯುತ್ ಇತ್ತು. ಇದುವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಸ್ಪಷ್ಟ ಉಲ್ಲಂಘನೆ ಆಗುತ್ತದೆ. ಆದ್ದರಿಂದ ಇವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸಿ ಎಂದು ದೂರಿನಲ್ಲಿ ಕೋರಿದ್ದಾರೆ.

‘ಜಗ್ಗಿ ವಾಸುದೇವ್ ಮೇಲೆ ಗೌರವವಿದೆ.ಆದರೆ, ಯಾರೇ ಆಗಲಿ ಯಾವುದೇ ಪ್ರಾಣಿ ಪಕ್ಷಿಗಳನ್ನು ಹಿಡಿದು ಪ್ರದರ್ಶನ ಮಾಡಬಾರದು ಎನ್ನುವುದು ನಮ್ಮ ಉದ್ದೇಶ’ ಎಂದು ಸಿ.ಎನ್.ಪೃಥ್ವಿರಾಜ್ ‘ಪ್ರಜಾವಾಣಿ’ಗೆತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT