ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದ್ಯತೆ ಮೇರೆಗೆ ಕಾಮಗಾರಿ ಪೂರ್ಣಗೊಳಿಸಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಸೂಚನೆ
Last Updated 15 ಜೂನ್ 2020, 13:22 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ನರೇಗಾ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಜಿಲ್ಲೆಯಾದ್ಯಂತ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತರುವ ದಿನಗೂಲಿ ನೌಕರರಿಗೆ ಹಾಗೂ ಸರ್ಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕರು, ಡಿ ಗ್ರೂಪ್ ನೌಕರರಿಗೆ ತಿಂಗಳಾಂತ್ಯಕ್ಕೆ ಏಜನ್ಸಿಗಳ ಮುಖಾಂತರ ವೇತನ ನೀಡಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು’ ಎಂದು ತಿಳಿಸಿದರು.

‘ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಹೊರ ರೋಗಿಗಳಿಗೆ ಕಡ್ಡಾಯವಾಗಿ ಮಾಸ್ಕ್ ನೀಡಬೇಕು. ಎಲ್ಲಾ ತಾಲ್ಲೂಕು ಆಸ್ಪತ್ರೆಗಳ ಮುಂಭಾಗದಲ್ಲಿ ವಾಹನಗಳ ನಿಲುಗಡೆ ಸಂಖ್ಯೆ ಹೆಚ್ಚಾಗುತ್ತಿದ್ದು, ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯ ನರೇಗಾ ಯೋಜನೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವ ಮೂಲಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಸುಮಾರು ₹21 ಕೋಟಿ ವೆಚ್ಚದ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವುದು ಶ್ಲಾಘನೀಯವಾದದ್ದು’ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ.ಯೋಗೇಶ್‍ಗೌಡ ಮಾತನಾಡಿ, ‘ವಿವಿಧ ತಾಲ್ಲೂಕುಗಳಲ್ಲಿನ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ನೋಡಿಕೊಳ್ಳಲಾಗುತ್ತಿದೆ. ಅಗತ್ಯ ಔಷಧಿಗಳನ್ನು ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ಹೊಸದಾಗಿ ಕೋವಿಡ್‌ ಪ್ರಕರಣಗಳು ವರದಿಯಾಗಿಲ್ಲ’ ಎಂದು ಹೇಳಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಶಿವಕುಮಾರ್ ಮಾತನಾಡಿ, ‘ಜಿಲ್ಲೆಯಲ್ಲಿ ಪ್ರಸ್ತುತ 311 ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಿವೆ. 97 ಗ್ರಾಮಗಳಿಗೆ ಟ್ಯಾಂಕರ್ ಮೂಲಕ, 214 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ ಯಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ‘ಜಿಲ್ಲಾ ಮಟ್ಟದ ಅಧಿಕಾರಿಗಳು ಆದ್ಯತೆ ಮೇರೆಗೆ ಕಾರ್ಯನಿರ್ವಹಿಸುತ್ತ, ಜಿಲ್ಲೆಯ ಅಭಿವೃದ್ದಿಗಾಗಿ ಸಮನ್ವಯತೆಯಿಂದ ಕೆಲಸ ಮಾಡಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಯೋಜನಾ ನಿರ್ದೇಶಕ ಗಿರಿಜಾ ಶಂಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT