ಶುಕ್ರವಾರ, ಫೆಬ್ರವರಿ 26, 2021
31 °C
ವಿವಿಧ ಯೋಜನೆಗಳ ಎಂಜಿನಿಯರ್ ಸಭೆ ನಡೆಸಿದ ಶಾಸಕ ಡಾ.ಕೆ.ಸುಧಾಕರ್, ಕ್ರೆಡಿಲ್ ಸಂಸ್ಥೆಯ ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ

ಡಿಸೆಂಬರ್ ಒಳಗೆ ಕಾಮಗಾರಿ ಪೂರ್ಣಗೊಳಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಭೆಯಲ್ಲಿ ಶಾಸಕ ಡಾ.ಕೆ.ಸುಧಾಕರ್ ಅವರು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಚಿಕ್ಕಬಳ್ಳಾಪುರ: ‘ಕ್ಷೇತ್ರದಲ್ಲಿ ಬಾಕಿ ಇರುವ 2016–17ನೇ ಸಾಲಿನ ಅಭಿವೃದ್ಧಿ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಬೇಕು. ಪ್ರತಿಯೊಂದು ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು’ ಎಂದು ಶಾಸಕ ಡಾ.ಕೆ.ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಮಂಗಳವಾರ ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ವಿವಿಧ ಯೋಜನೆಗಳ ಎಂಜಿನಿಯರ್‌ಗಳ ಸಭೆ ನಡೆಸಿದ ಅವರು ಕ್ರೆಡಿಲ್ ಸಂಸ್ಥೆಯ ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ, ಬಾಕಿ ಇರುವ ಕಾಮಗಾರಿಗಳನ್ನು ಪಂಚಾಯತ್ ರಾಜ್ ಇಲಾಖೆಯವರು ನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯ ₨5 ಕೋಟಿ ಅನುದಾನವನ್ನು ಹಿಂಪಡೆದು ಪಂಚಾಯತ್ ರಾಜ್ ಇಲಾಖೆಗೆ ಬಿಡುಗಡೆ ಮಾಡುವಂತೆ ಶಾಸಕರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಸಭೆಯಲ್ಲಿಯೇ ಪತ್ರ ಬರೆದರು.

‘ವಿಶ್ವೇಶ್ವರಯ್ಯ ಜಲ ನಿಗಮದ ವತಿಯಿಂದ ನಿರ್ವಹಿಸಬೇಕಾಗಿರುವ ₨16.50 ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ, ಚರಂಡಿ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಹಾಜರಿದ್ದ ಲೋಕೋಪಯೋಗಿ, ಸಣ್ಣ ನೀರಾವರಿ, ಪಂಚಾಯತ್ ರಾಜ್ ಎಂಜಿನಿಯರಿಂಗ್, ಗ್ರಾಮೀಣ ನೀರು ಸರಬರಾಜು ಇಲಾಖೆ, ಕೊಳಗೇರಿ ಅಭಿವೃದ್ಧಿ ಮಂಡಳಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ನಗರಸಭೆ ಅಧಿಕಾರಿಗಳನ್ನು ಉದ್ದೇಶಿಸಿ ಶಾಸಕರು, ‘ಕ್ಷೇತ್ರದಾದ್ಯಂತ ಸುಮಾರು ₨250 ಕೋಟಿ ವೆಚ್ಚದ ಕಾಮಗಾರಿಗಳು ಪೂರ್ಣಗೊಳ್ಳಬೇಕಾಗಿದೆ. ಎಲ್ಲಾ ಕಾಮಗಾರಿಗಳು ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಲೇ ಬೇಕು ಎಂದು ತಾಕೀತು ಮಾಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಂಜೀವಪ್ಪ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಅಜಿತ್, ಪಂಚಾಯತ್ ರಾಜ್ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಶಿವಕುಮಾರ್ ಲೋಕೂರ್ ಸಭೆಯಲ್ಲಿ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು