ವರ್ಷಾಂತ್ಯಕ್ಕೆ ಅಂಗನವಾಡಿ ಕೇಂದ್ರಗಳ ಕಟ್ಟಡ ಕಾಮಗಾರಿ ಪೂರ್ಣ

7

ವರ್ಷಾಂತ್ಯಕ್ಕೆ ಅಂಗನವಾಡಿ ಕೇಂದ್ರಗಳ ಕಟ್ಟಡ ಕಾಮಗಾರಿ ಪೂರ್ಣ

Published:
Updated:

ಸಾದಲಿ: ‘ಈ ವರ್ಷದ ಅಂತ್ಯಕ್ಕೆ ಶಿಡ್ಲಘಟ್ಟ ತಾಲ್ಲೂಕಿನ ಬಾಕಿ ಇರುವ ಎಲ್ಲ ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ಯಾವುದೇ ಕೇಂದ್ರ ಬಾಡಿಗೆ ಕಟ್ಟಡದಲ್ಲಿ ನಡೆಯುವುದಿಲ್ಲ’ ಎಂದು ನರೇಗಾ ಸಹಾಯಕ ನಿರ್ದೇಶಕ ಶ್ರೀನಾಥಗೌಡ ಹೇಳಿದರು.

ನರೇಗಾ ಯೋಜನೆಯಡಿ ನಿರ್ಮಾಣವಾಗುತ್ತಿರುವ ಗಂಜಿಗಂಟೆಯ ಅಂಗನವಾಡಿ ಕಟ್ಟಡ ಕಾಮಗಾರಿ ಪರಿಶೀಲಿಸಿ ಮಾತನಾಡಿದರು.

‘ಕಾಮಗಾರಿ ಸಮಯದಲ್ಲಿ ಅಧಿಕಾರಿಗಳು ಗುಣಮಟ್ಟದ ಬಗ್ಗೆ ಗಮನಹರಿಸಬೇಕು. ಗುಣಮಟ್ಟ ಸರಿ ಇಲ್ಲದಿದ್ದರೆ ಅಧಿಕಾರಿಗಳೇ ಹೊಣೆ. 34 ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ’ ಎಂದರು.

‘ವಿಧಾನಸಭಾ ಚುನಾವಣೆ ಕಾರಣಕ್ಕೆ ಕಾಮಗಾರಿ ಸ್ಥಗಿತಗೊಂಡಿತ್ತು. 13 ಕಡೆದ ಕಾಮಗಾರಿ ಮುಗಿದಿದೆ. ಉಳಿದ ಕಟ್ಟಡಗಳ ಕಾಮಗಾರಿ ಪ್ರಗತಿಯಲ್ಲಿದೆ. ಅವುಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು’ ಎಂದು ಹೇಳಿದರು.

ಕೇಂದ್ರಗಳಲ್ಲಿ ಉತ್ತಮವಾದ ಅಡುಗೆಕೋಣೆ, ಸಭಾಂಗಣ ದಾಸ್ತಾನು ಕೊಠಡಿ, ಶೌಚಾಲಯ ಒದಗಿಸಲಾಗುವುದು. ಕಾಮಗಾರಿಯಲ್ಲಿ ಲೋಪ ಕಂಡು ಬಂದರೆ ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಮಾಹಿತಿ ನೀಡಿದರು.

 ‘ಮಳೆಗಾಲದಲ್ಲಿ ಹಳೇ ಕಟ್ಟಡಗಳು ಕುಸಿಯುವ ಆತಂಕ ಇತ್ತು. ಈಗ ಮಕ್ಕಳ ಹಿತ ಕಾಪಾಡಬಹುದು’ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಾರ್ತಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !