ಮಂಗಳವಾರ, ಆಗಸ್ಟ್ 16, 2022
29 °C

ರೈತರ ಮೇಲಿನ ಹಲ್ಲೆಗೆ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ಕೃಷಿ ಕೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ನಡೆದ ಲಾಠಿ ಪ್ರಹಾರ ಖಂಡಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆ (ಎಐಜೆಎಸ್‌ಸಿಸಿ)ಯ ತಾಲ್ಲೂಕಿನ ಮುಖಂಡರು ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಮುಂದೆ ಪ್ರತಿಭಟನೆ ನಡೆಸಿದರು. 

ಸುಂದರಯ್ಯ ಭವನದಿಂದ ಮೆರವಣಿಗೆ ಹೊರಟ ಮುಖಂಡರು ಮುಖ್ಯರಸ್ತೆಯಲ್ಲಿ ಸಂಚರಿಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಎಂ.ಪಿ. ಮುನಿವೆಂಕಟಪ್ಪ ಮಾತನಾಡಿ, ಭೂಸುಧಾರಣಾ, ಎಪಿಎಂಸಿ, ಅಗತ್ಯ ವಸ್ತುಗಳ ಕಾಯ್ದೆಯ ತಿದ್ದುಪಡಿ ಖಂಡಿಸಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೆಹಲಿಯ ಒಳಗೆ ಪ್ರವೇಶ ನೀಡಿಲ್ಲ. ಎಲ್ಲಾ ಗಡಿಗಳನ್ನು ಮುಚ್ಚಿಸಿ ಉಕ್ಕಿನ ಬೇಲಿ ಹಾಕಿದ್ದಾರೆ. ರೈತರ ಮೇಲೆ ಅಶ್ರುವಾಯು ಸಿಡಿಸಿದ್ದಾರೆ. ಲಾಠಿ ಪ್ರಹಾರ ಮಾಡಿಸಿದ್ದಾರೆ. ಸೋಮವಾರ ಗೋಲಿಬಾರ್ ಮಾಡಿದ್ದರಿಂದ ರೈತರೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ದೆಹಲಿಯಲ್ಲಿ ಭದ್ರತಾ ಪಡೆಗಳನ್ನು ನೆಲೆಗೊಳಿಸಲಾಗಿದೆ. ಆ ಮೂಲಕ ರೈತರು ಮತ್ತು ಜನರ ನಡುವೆ ಭಯೋತ್ಪಾದನೆಯ ವಾತಾವರಣ ಸೃಷ್ಟಿಸಲು ಮುಂದಾಗಿದೆ. ರೈತರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.

ಸಿಪಿಐ(ಎಂ) ಯುವ ಮುಖಂಡ ಡಾ.ಎ. ಅನಿಲ್ ಕುಮಾರ್ ಮಾತನಾಡಿ, ದೇಶಕ್ಕೆ ಅನ್ನ ನೀಡುವ ರೈತರು ತಮ್ಮ ಹಕ್ಕುಗಳನ್ನು ಕೇಳಲು ದೆಹಲಿಗೆ ಬರುತ್ತಿದ್ದರು. ಆದರೆ, ನರೇಂದ್ರ ಮೋದಿ ರೈತರ ಹಕ್ಕುಗಳನ್ನು ದಮನ ಮಾಡಲು ಹೊರಟಿದೆ. ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ರೈತರ ಹೋರಾಟಕ್ಕೆ ಪ್ರತಿಯೊಬ್ಬರೂ ಬೆಂಬಲ ನೀಡಬೇಕಿದೆ. ಡಿ. 1ರಿಂದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯ ಎಂ.ಎನ್. ರಘುರಾಮರೆಡ್ಡಿ, ತಾಲ್ಲೂಕು ಅಧ್ಯಕ್ಷ ಎ.ಎನ್. ಶ್ರೀರಾಮಪ್ಪ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಬಿ. ಸಾವಿತ್ರಮ್ಮ, ನೆಟಕುಂಟಪಲ್ಲಿ ಜಹೀರ್ ಬೇಗ್, ಮಾಚನಪಲ್ಲಿ ಬೈರೆಡ್ಡಿ, ಗೊಲ್ಲಪಲ್ಲಿ ಮಂಜುನಾಥ್, ಅಶೋಕ್, ನಲ್ಲಪರೆಡ್ಡಿ, ಮುನಿಚಂದ್ರ, ಸತೀಶ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.