ಪ್ರತ್ಯೇಕ ರಾಜ್ಯದ ಕೂಗಿಗೆ ಚುಟುಕು ಸಾಹಿತ್ಯ ಪರಿಷತ್ತು ಖಂಡನೆ

7

ಪ್ರತ್ಯೇಕ ರಾಜ್ಯದ ಕೂಗಿಗೆ ಚುಟುಕು ಸಾಹಿತ್ಯ ಪರಿಷತ್ತು ಖಂಡನೆ

Published:
Updated:

ಚಿಕ್ಕಬಳ್ಳಾಪುರ: ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಹೋರಾಟ ನಡೆಸುತ್ತಿರುವವರಿಗೆ ನಮ್ಮ ಸಂಸ್ಕೃತಿಯ ಅರಿವು ಇಲ್ಲ. ಕೇವಲ ರಾಜಕೀಯ ಲಾಭಕ್ಕಾಗಿ ಪ್ರತ್ಯೇಕ ಧ್ವನಿ ಎತ್ತುವುದು ಸರಿಯಲ್ಲ. ಇದನ್ನು ಚುಟುಕು ಸಾಹಿತ್ಯ ಪರಿಷತ್ತು ಖಂಡಿಸುತ್ತದೆ’ ಎಂದು  ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಯಲುವಹಳ್ಳಿ ಸೊಣ್ಣೇಗೌಡ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಖಂಡ ಕರ್ನಾಟಕಕ್ಕಾಗಿ ಹಲವು ಮಹನೀಯರು ಶ್ರಮಿಸಿದ್ದಾರೆ. ನಮ್ಮ ಸಂಸ್ಕೃತಿಯ ಗತ ವೈಭವದ ಅರಿವಿಲ್ಲದವರು ಇತ್ತೀಚಿನ ದಿನಗಳಲ್ಲಿ ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಹೋರಾಟ ಮಾಡಿ ಹಕ್ಕುಗಳನ್ನು ಪಡೆಯುವುದರಲ್ಲಿ ಯಾವುದೇ ಅಭ್ಯಂತರವಿಲ್ಲ’ ಎಂದರು.

‘ಉತ್ತರ ಕರ್ನಾಟಕದ ಹೆಚ್ಚು ಮಂದಿ ಮುಖ್ಯಮಂತ್ರಿಗಳಾಗಿದ್ದರು. ಬೆಳಗಾವಿಯಲ್ಲಿ ಸುವರ್ಣಸೌಧ, ಸರ್.ಎಂ.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೀದರ್‌ನಲ್ಲಿ ಪಶು ವೈದ್ಯಕೀಯ ವಿಶ್ವವಿದ್ಯಾಲಯ, ಹುಬ್ಬಳ್ಳಿ–ಧಾರವಾಡದಲ್ಲಿ ಹೈಕೋರ್ಟ್ ಸ್ಥಾಪನೆ ಹೀಗೆ ಹಲವು ಸೌಲಭ್ಯಗಳನ್ನು ನೀಡಲಾಗಿದೆ’ ಎಂದು ಹೇಳಿದರು.

‘ಉತ್ತರ ಕರ್ನಾಟಕ ಅಭಿವೃದ್ಧಿ ಹಿನ್ನಡೆಗೆ ಅಲ್ಲಿನ ಜನಪ್ರತಿನಿಧಿಗಳೇ ನೇರ ಕಾರಣ. ಸರ್ಕಾರದಿಂದ ಬಂದ ಹಣವನ್ನು ಸಮರ್ಪಕವಾಗಿ ಬಳಸಿಕೊಂಡಿದ್ದರೆ ಈಗ ಪ್ರತ್ಯೇಕ ರಾಜ್ಯದ ಕೂಗು ಬರುತ್ತಿರಲಿಲ್ಲ. ಜನಪ್ರತಿನಿಧಿಗಳ ಬೇಜಾಬ್ದಾರಿತನದಿಂದ ಕರ್ನಾಟಕವನ್ನು ಒಡೆಯಲು ಮುಂದಾಗಿರುವುದು ಸರಿಯಲ್ಲ’ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ಪಾತಮುತ್ತಕಹಳ್ಳಿ ಎಂ.ಚಲಪತಿಗೌಡ ಮಾತನಾಡಿದರು. ಪದಾಧಿಕಾರಿಗಳಾದ ಸುಶೀಲ್‌ ಮುಂಜುನಾಥ್‌, ಇಂದುಮತಿ, ಸರಸಮ್ಮ, ಲತಾ ರಾಮ್‌ಮೋಹನ್‌, ಸುದರ್ಶನ್‌, ವೆಂಕಟೇಶ್, ನಾಗಭೂಷಣ್, ಶ್ರೀನಿವಾಸ್‌, ವಿನೋದ್, ರಮಣ ಅಖಿಲೇಶ್‌ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !