ಮಂಗಳವಾರ, ಫೆಬ್ರವರಿ 25, 2020
19 °C
ಬಿಜೆಪಿ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ.ಅಂಜನಪ್ಪ ವೈಯಕ್ತಿಕ ನಿಂದನೆ

ವಂಚಕರಿಗೆ ಮಣೆ ಹಾಕಿದ್ದಕ್ಕೆ ಕಾಂಗ್ರೆಸ್‌ ಅಧೋಗತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಕಾಂಗ್ರೆಸ್‌ಗೆ ಹೇಗೆ ದ್ರೋಹ ಮಾಡಬೇಕು ಎಂದು ಕಾಂಗ್ರೆಸ್ ಶಾಸಕರಿಗೆ ಕಲಿಸಿದ ಎಸ್‌.ಎಂ.ಕೃಷ್ಣ ಅವರಂತಹ ವಂಚಕರಿಗೆ ಮಣೆ ಹಾಕಿದ ಕಾರಣಕ್ಕೆ ಕಾಂಗ್ರೆಸ್‌ ಇವತ್ತು ಇಂತಹ ಸ್ಥಿತಿ ಬಂದಿದೆ’ ಎಂದು ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ.ಅಂಜನಪ್ಪ ಅವರು ವಾಗ್ದಾಳಿ ನಡೆಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏನು ಗತಿ ಇಲ್ಲದವರನ್ನು ತಂದು ಕಾಂಗ್ರೆಸ್‌ ಮುಖ್ಯಮಂತ್ರಿ, ಕೇಂದ್ರ ಸಚಿವರು, ರಾಜ್ಯಪಾಲರನ್ನಾಗಿ ಮಾಡಿತು. ಮೂರು ಕಾಸಿನ ಯೋಗ್ಯತೆ ಇಲ್ಲದವರು 86 ವಯಸ್ಸಿನಲ್ಲಿ ಪಕ್ಷಕ್ಕೆ ದ್ರೋಹ ಮಾಡಿ ಹೋದರು. ತಾಯಿಗೆ ಮೋಸ ಮಾಡುವ ಇಂತಹವರಿಂದಲೇ ಪಕ್ಷಕ್ಕೆ ಹಾನಿಯಾಗಿದೆ’ ಎಂದು ಆರೋಪಿಸಿದರು. 

‘ಉಪ ಚುನಾವಣೆಯಲ್ಲಿ ಬಿಜೆಪಿ ಹಣಬಲ, ಅಧಿಕಾರ ದುರುಪಯೋಗಪಡಿಸಿಕೊಂಡು ಗೆಲುವು ಸಾಧಿಸಿದೆ. ನಾವು ಕಾಂಗ್ರೆಸ್‌ನ್ನು ಮತ್ತೆ ಸಂಘಟಿಸಿ ಮೇಲೆತ್ತುವ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)