ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದೆ. ಆದರೆ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಪ್ರಮುಖ ಮತ್ತು ಆಯಕಟ್ಟಿನ ರಾಜಕೀಯ ಪ್ರಾತಿನಿಧ್ಯ ಜಿಲ್ಲೆಯಲ್ಲಿ ದೊರೆತಿಲ್ಲ.

ಮತಬ್ಯಾಂಕ್ಗಾಗಿ ಪರಿಶಿಷ್ಟರನ್ನು ಬಳಸಿಕೊಳ್ಳಲಾಗಿದೆ. ಆದರೆ ಅಧಿಕಾರದ ಹುದ್ದೆಗಳಿಂದ ದೂರವಿಡಲಾಗಿದೆ ಎನ್ನುವ ಅಸಮಾಧಾನ ಮತ್ತು ಬೇಸರ ಜಿಲ್ಲೆಯ ದಲಿತ ಸಮುದಾಯದಲ್ಲಿದೆ.

2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯ ದಲಿತ ಸಂಘಟನೆಗಳು ಬಹಿರಂಗವಾಗಿಯೇ ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದವು. ದಲಿತ ಸಂಘಟನೆಗಳ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್, ಇಂದೂಧರ ಹೊನ್ನಾಪುರ ಸೇರಿದಂತೆ ರಾಜ್ಯ ಮಟ್ಟದ ದಲಿತ ನಾಯಕರು ಕಾಂಗ್ರೆಸ್ ಪರವಾಗಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮಾಧ್ಯಮಗೋಷ್ಠಿ ನಡೆಸಿದ್ದರು. ದಲಿತ ಸಂಘಟನೆಗಳ ನಾಯಕರು ಸಹ ಕಾಂಗ್ರೆಸ್ ಪರವಾಗಿ ಮತಯಾಚಿಸಿದ್ದರು. ಆ ಪರಿಣಾಮ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.

ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದಲಿತರಿಗೆ ಸರ್ಕಾರದ ನೇಮಕಾತಿಯಲ್ಲಿ ಯಾವುದೇ ಆಯಕಟ್ಟಿನ ಸ್ಥಾನಮಾನ ಕೊಡದೆ ಕಡೆಗಣಿಸಲಾಗಿದೆ ಎನ್ನುವುದು ಜಿಲ್ಲೆಯ ದಲಿತರ ಮುಖಂಡರ ಆರೋಪ.

ಒಕ್ಕಲಿಗ ಸಮಾಜಕ್ಕೆ ಸೇರಿದ ಡಾ.ಎಂ.ಸಿ.ಸುಧಾಕರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಒಕ್ಕಲಿಗ ಸಮುದಾಯದ ಕೇಶವರೆಡ್ಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಬಾಗೇಪಲ್ಲಿಯಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸಹ ಒಕ್ಕಲಿಗ ಸಮಾಜದವರು. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಲಿಜ ಸಮುದಾಯದವರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಯಲುವಳ್ಳಿ ಎನ್.ರಮೇಶ್ ಸಹ ಒಕ್ಕಲಿಗ ಸಮಾಜಕ್ಕೆ ಸೇರಿದ್ದಾರೆ.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಪರಿಶಿಷ್ಟ ಜಾತಿಯ ಮತದಾರರು ದೊಡ್ಡ ಸಂಖ್ಯೆಯಲ್ಲಿಯೇ ಇದ್ದಾರೆ. ಈ ಹಿಂದೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಎಸ್ಸಿ ಮೀಸಲು ಕ್ಷೇತ್ರವಾಗಿತ್ತು. ಶಿಡ್ಲಘಟ್ಟ, ಚಿಂತಾಮಣಿ, ಬಾಗೇಪಲ್ಲಿ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಯ ಮತದಾರರ ಒಲವು ನಿಲುವು ಅಭ್ಯರ್ಥಿಗಳ ಸೋಲು ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸುತ್ತದೆ.

ಹೀಗಿದ್ದರೂ ಪ್ರಮುಖ ಅಧಿಕಾರದ ಆಯಕಟ್ಟಿನ ಹುದ್ದೆಗಳಿಗೆ ಪರಿಶಿಷ್ಟ ಜಾತಿಯ ರಾಜಕೀಯ ನಾಯಕರ ನೇಮಕ ಸಾಧ್ಯವಾಗಿಲ್ಲ.

ಚಿಂತಾಮಣಿಯ ಗೊಲ್ಲಹಳ್ಳಿ ಶಿವಪ್ರಸಾದ್ ಅವರನ್ನು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಶಿವಪ್ರಸಾದ್ ರಾಜಕಾರಣದಿಂದ ದೂರವಿದ್ದವರು. ಹೋರಾಟದ ಹಿನ್ನೆಲೆಯುಳ್ಳ ಶಿವಪ್ರಸಾದ್, ಜನಪದ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಮತ್ತು ಆ ಕ್ಷೇತ್ರಕ್ಕೆ ಸಲ್ಲಿಸಿರುವ ಕೊಡುಗೆ ಕಾರಣದಿಂದ ಅಧ್ಯಕ್ಷ ಹುದ್ದೆ ಪಡೆದಿದ್ದಾರೆ.

ಬೀಜ ನಿಗಮದ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಒಕ್ಕಲಿಗ ಸಮುದಾಯದ ನಂದಿ ಆಂಜನಪ್ಪ ಮತ್ತು ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಬಾಗೇಪಲ್ಲಿ ಮಾಜಿ ಶಾಸಕ ಹಾಗೂ ಬಲಿಜ ಸಮುದಾಯದ ಎನ್.ಸಂಪಂಗಿ ಅವರಿಗೆ ಅವಕಾಶ ನೀಡಲಾಗಿದೆ. ಈ ಇಬ್ಬರು ಕಾಂಗ್ರೆಸ್ನಲ್ಲಿ ಸಕ್ರಿಯವಾಗಿರುವ ನಾಯಕರು. ಜಿಲ್ಲೆಯಲ್ಲಿ ಪಕ್ಷದಲ್ಲಿ ಸಕ್ರಿಯವಾಗಿರುವ ದಲಿತ ನಾಯಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನದಲ್ಲಿಯೂ ಅವಕಾಶಗಳಿಲ್ಲ.

ಶಿಡ್ಲಘಟ್ಟ ತಾಲ್ಲೂಕಿನ ಬೈರಾಸಂದ್ರದ ಡಾ.ಬಿ.ಸಿ.ಮುದ್ದು ಗಂಗಾಧರ್ ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರುಕಟ್ಟೆ ಮಂಡಳಿ ಅಧ್ಯಕ್ಷರಾಗಿದ್ದಾರೆ. ಆದರೆ ಅವರ ಕಾರ್ಯಕ್ಷೇತ್ರ ಬೆಂಗಳೂರು ಮತ್ತು ಕೋಲಾರ, ಬೆಂಗಳೂರಿನಲ್ಲಿ ಅವರು ದಂತ ವೈದ್ಯರಾಗಿದ್ದಾರೆ.

ಮುದ್ದು ಗಂಗಾಧರ್ 2023ರ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲು ಮೀಸಲು ಕ್ಷೇತ್ರ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ಕೋಲಾರ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಉಳಿದಂತೆ ಜಿಲ್ಲೆಯ ಮಟ್ಟಿಗೆ ಸಣ್ಣ ಪುಟ್ಟ ಅಧಿಕಾರದ ಹುದ್ದೆಗಳನ್ನು ನೀಡಲಾಗಿದೆಯೇ ಹೊರತು ‘ಅಧಿಕಾರ’ ಚಲಾಯಿಸುವ ಹುದ್ದೆಗಳು ದಲಿತರಿಂದ ದೂರವೇ ಇವೆ.

ರಾಜಕೀಯ ಕಾರಣಗಳಿಂದ ಶಿಡ್ಲಘಟ್ಟ ಮತ್ತು ಗೌರಿಬಿದನೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಇನ್ನೂ ಅಧ್ಯಕ್ಷರ ನೇಮಕ ಸಾಧ್ಯವಾಗಿಲ್ಲ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ದಲಿತ ಸಮುದಾಯದ ಮತದಾರರು ಹೆಚ್ಚಿದ್ದಾರೆ. ಸಾಮಾನ್ಯವಾಗಿ ಈ ಹಿಂದಿನಿಂದಲೂ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹುದ್ದೆಯ ವಿಚಾರ ಬಂದಾಗ ದಲಿತ ನಾಯಕರ ಹೆಸರುಗಳು ಹೆಚ್ಚು ಚಾಲ್ತಿಗೆ ಬರುತ್ತವೆ. ಕಾಂಗ್ರೆಸ್ ಹಾಗೂ ದಸಂಸ ನಾಯಕ ಸು.ಧಾ ವೆಂಕಟೇಶ್ ಅವರ ಹೆಸರು ಆಗಾಗ್ಗೆ ಕೇಳಿ ಬರುತ್ತಿತ್ತು. ಆದರೆ ಹುದ್ದೆ ಮಾತ್ರ ದೊರೆಯಲಿಲ್ಲ. ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದದ್ದೂ ಇದೇ ಕಥೆ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಪ್ರಾತಿನಿಧ್ಯವನ್ನು ಗಮನಿಸಿದರೂ ದಲಿತರು ದೂರವಿದ್ದಾರೆ.

ಹೀಗೆ ಜಿಲ್ಲೆಯಲ್ಲಿ ಬಹುಸಂಖ್ಯೆಯಲ್ಲಿರುವ ದಲಿತರಿಗೆ ರಾಜಕೀಯ ಅಧಿಕಾರ ಮಾತ್ರ ದೂರದ ಮಾತು ಎನಿಸಿದೆ.

ಮುನಿಯಪ್ಪ ರಾಜೀನಾಮೆ; ಒಕ್ಕಲಿಗರಿಗೆ ಅವಕಾಶ

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರನ್ನಾಗಿ 2024ರ ಮಾರ್ಚ್ನಲ್ಲಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ಅವರನ್ನು ನೇಮಿಸಲಾಗಿತ್ತು. ಆದರೆ ವೈಯಕ್ತಿಕ ಕಾರಣ ನೀಡಿ ಮುನಿಯಪ್ಪ ರಾಜೀನಾಮೆ ನೀಡಿದರು. ಮುನಿಯಪ್ಪ ರಾಜೀನಾಮೆಯಿಂದ ತೆರವಾದ ಈ ಹುದ್ದೆಯನ್ನು ಅದೇ ಸಮುದಾಯದ ಕಾಂಗ್ರೆಸ್ ನಾಯಕರಿಗೆ ನೀಡುತ್ತಾರೆ ಎನ್ನುವ ಚರ್ಚೆಗಳು ನಡೆದಿದ್ದವು. ಆದರೆ ಆ ಹುದ್ದೆಯನ್ನು ಒಕ್ಕಲಿಗ ಸಮುದಾಯದ ಯಲುವಳ್ಳಿ ರಮೇಶ್ ಅವರಿಗೆ ನೀಡಲಾಯಿತು.

ಮಹಿಳೆಯರ ಕಡೆಗಣನೆ

ಪ್ರಮುಖ ಆಯಕಟ್ಟಿನ ಜಾಗದಲ್ಲಿ ಪಕ್ಷಕ್ಕೆ ದುಡಿದಿರುವ ನಾಯಕಿಯರಿಗೂ ಅವಕಾಶ ಸಿಕ್ಕಿಲ್ಲ. ಎಲ್ಲ ಪ್ರಮುಖ ಹುದ್ದೆಗಳಲ್ಲಿ ನಾಯಕರೇ ಇದ್ದಾರೆ.

‘ನಾವು ಮತಬ್ಯಾಂಕ್ ಅಷ್ಟೇ’

‘ನಮ್ಮನ್ನು ಈ ಹಿಂದಿನಿಂದ ರಾಜಕೀಯ ಪಕ್ಷಗಳು ಮತಬ್ಯಾಂಕ್ ಆಗಿ ನೋಡುತ್ತವೆ ಅಷ್ಟೇ. ಚುನಾವಣಾ ಕಾಲದಲ್ಲಿ ನಮ್ಮನ್ನು ಯಾವ ರೀತಿ ಉಪಯೋಗಿಸಿಕೊಳ್ಳಬೇಕೊ ಆ ರೀತಿಯಲ್ಲಿ ಬಳಸಿಕೊಳ್ಳುತ್ತಾರೆ’ ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ಮೇಲೂರು ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಶೇ 40ರಷ್ಟು ದಲಿತರು ಇದ್ದೇವೆ. ಈ ಬಾರಿ 11 ದಲಿತ ಸಂಘಟನೆಗಳು ಒಗ್ಗೂಡಿ ಬಿಜೆಪಿ ಜೆಡಿಎಸ್ ವಿರೋಧಿಸಿ ಕಾಂಗ್ರೆಸ್ ಬೆಂಬಲಿಸಿದೆವು ಎಂದರು. ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಅವರ ಹೆಸರು ಹೇಳುತ್ತಾರೆ. ಆದರೆ ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯಗಳು ಮಾತ್ರ ಇಲ್ಲ. ಜಿಲ್ಲೆಯ ಯಾವುದೇ ತಾಲ್ಲೂಕಿನ ಯಾವುದೇ ಗ್ರಾಮಕ್ಕೆ ಹೋಗಿ ನೋಡಿದರೂ ಇದು ಪರಿಶಿಷ್ಟರ ಕಾಲೊನಿ ಎಂದು ನೇರವಾಗಿ ಹೇಳಬಹುದು. ಆ ಮಟ್ಟದ ಸ್ಥಿತಿ ಕಾಲೊನಿಗಳಲ್ಲಿ ಇದೆ. ಅಭಿವೃದ್ಧಿ ದೂರವೇ ಇದೆ ಎಂದರು. ನಮ್ಮ ಸಮುದಾಯದಲ್ಲಿಯೂ ನಾಯಕರು ಇದ್ದಾರೆ. ಆ ನಾಯಕರನ್ನು ಗುರುತಿಸಿ ಆಯಕಟ್ಟಿನ ಅಧಿಕಾರದ ಹುದ್ದೆಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.