ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟ | ಆಗ್ನೇಯ ಶಿಕ್ಷಕರ ಕ್ಷೇತ್ರ: ಮತಯಾಚನೆ

Published 19 ಜನವರಿ 2024, 13:51 IST
Last Updated 19 ಜನವರಿ 2024, 13:51 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಕಾಂಗ್ರೆಸ್ ಸರ್ಕಾರವು ಸರ್ಕಾರಿ ನೌಕರರ ಹಾಗೂ ಶಿಕ್ಷಕರ ಪರ ಇದೆ. ಎಲ್ಲರ ಸಮಸ್ಯೆಗಳಿಗೂ ಸ್ಪಂದಿಸುತ್ತಿದ್ದು ಇದನ್ನೆ ಮತದಾರರ ಬಳಿ ಮನವರಿಕೆ ಮಾಡಿಕೊಟ್ಟು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು.

ವಿಧಾನ ಪರಿಷತ್‌ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರವಾಗಿ ಮತಯಾಚನೆ ನಡೆಸಿ ಮಾತನಾಡಿದರು.

ಹಳೆ ಪಿಂಚಣಿ ಯೋಜನೆ ಜಾರಿಗೆ ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಈ ಅಂಶವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿಯೂ ಇತ್ತು. ಅದನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಪಕ್ಷ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದರು.

ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಮಾತನಾಡಿ, ತಾಲ್ಲೂಕಿನಲ್ಲಿ 540ಕ್ಕೂ ಹೆಚ್ಚು ಶಿಕ್ಷಕ ಮತದಾರರಿದ್ದು ಅವರೆಲ್ಲರನ್ನೂ ಭೇಟಿ ಮಾಡಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸುವ ಮೂಲಕ ಪಕ್ಷಕ್ಕೆ ಇನ್ನಷ್ಟು ಶಕ್ತಿ ತುಂಬಬೇಕಿದೆ ಎಂದರು.

ಪೂರ್ಣಿಮಾ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು. ಡಾಲ್ಫಿನ್ ಪಬ್ಲಿಕ್ ಸ್ಕೂಲ್, ವಾಸವಿ ಶಾಲೆ, ಬಿಜಿಎಸ್, ಕ್ರೆಸೆಂಟ್, ಸರಸ್ವತಿ ಕಾನ್ವೆಂಟ್, ಸರ್ಕಾರಿ ಜೂನಿಯರ್ ಕಾಲೇಜು, ಶಾರದಾ ಸೇರಿದಂತೆ ಹಲವು ಶಾಲೆಗಳಿಗೆ ಭೇಟಿ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾರಾಜೀವ್‌ಗೌಡ, ಡಾಲ್ಫಿನ್ ನಾಗರಾಜ್, ಟಿ.ಕೆ.ನಟರಾಜ್, ದೊಗರನಾಯಕನಹಳ್ಳಿ ಡಿ.ವಿ.ವೆಂಕಟೇಶ್, ಅಶ್ವತ್ಥ್‌ನಾರಾಯಣ್, ಬಿ.ವಿ.ಮುನೇಗೌಡ, ಕೆ.ಗುಡಿಯಪ್ಪ, ಚಿದಾನಂದಮೂರ್ತಿ, ಗುಡಿಹಳ್ಳಿ ನಾರಾಯಣಸ್ವಾಮಿ, ರಾಮಚಂದ್ರಪ್ಪ, ಅಪ್ಸರ್‌ಪಾಷ, ಅನಿಲ್‌ಕುಮಾರ್, ಲಕ್ಷ್ಮಣ್, ಕೃಷ್ಣಮೂರ್ತಿ, ವರದಣ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT